AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲರೂ ನಂಗೆ ಅಭಿಮಾನಿಗಳು; ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ

ಎಲ್ಲರೂ ನಂಗೆ ಅಭಿಮಾನಿಗಳು; ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ

 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 24, 2025 | 11:00 AM

Share

Celebrities War: ಕನ್ನಡ ಚಿತ್ರರಂಗದಲ್ಲಿ ಸದ್ಯ ಎಲ್ಲ ಕಡೆಗಳಲ್ಲಿ ಫ್ಯಾನ್ ವಾರ್​ಗಳ ಬಗ್ಗೆ ಚರ್ಚೆಗಳು ನಡೆಯುತ್ತಾ ಇವೆ. ಸೆಲೆಬ್ರಿಟಿಗಳ ಅಭಿಮಾನಿಗಳ ಮಧ್ಯೆ ಕಿತ್ತಾಟ ಜೋರಾಗಿದೆ ಎಂದರೂ ತಪ್ಪಾಗಲಾರದು. ಹೀಗಿರುವಾಗಲೇ ಸಾಧು ಕೋಕಿಲ ಅವರು ಒಂದು ವಿಷಯದ ಬಗ್ಗೆ ಮಾತನಾಡಿದ್ದಾರೆ. ಅದುವೇ ಫ್ಯಾನ್ ವಾರ್.

ಕನ್ನಡ ಚಿತ್ರರಂಗದಲ್ಲಿ ಫ್ಯಾನ್ ವಾರ್ ಬಗ್ಗೆ ಚರ್ಚೆ ನಡೆಯುತ್ತಿರುವುದು ತಿಳಿದೇ ಇದೆ. ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳು ಸಾಕಷ್ಟು ಕಿತ್ತಾಡಿಕೊಳ್ಳುತ್ತಿರುವುದನ್ನು ನೋವು ನೋಡಿರಬಹುದು. ಈ ಬಗ್ಗೆ ಸಾಧು ಕೋಕಿಲಗೆ ಪ್ರಶ್ನೆ ಮಾಡಲಾಯಿತು. ಎಲ್ಲಾ ಸ್ಟಾರ್​​ಸ್​​ಗಳ ಫ್ಯಾನ್ಸ್ ನನಗೆ ಅಭಿಮಾನಿಗಳು. ಹೀಗಾಗಿ, ನಾನು ಈ ಬಗ್ಗೆ ಮಾತನಾಡುವುದೇ ಇಲ್ಲ ಎಂದಿದ್ದಾರೆ ಸಾಧು. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 24, 2025 10:57 AM
Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More