‘ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್’; ಕೈ ಪಕ್ಷದ ಪರ ಸಾಧು ಕೋಕಿಲ ಅಬ್ಬರದ ಪ್ರಚಾರ
Sadhu Kokila: ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ ಪರ ಸಾಧು ಕೋಕಿಲ ಪರ ಪ್ರಚಾರ ಮಾಡುತ್ತಿದ್ದಾರೆ. ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಾಧು ಕೋಕಿಲ ಕೂಡ ಭಾಗವಹಿಸಿ ಮಾತನಾಡಿದ್ದಾರೆ.
ಸಾಧು ಕೋಕಿಲ (Sadhu Kokila) ಅವರು ಸಂಗೀತ ಸಂಯೋಜಕರಾಗಿ, ಹಾಸ್ಯ ನಟನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ ಪರ ಸಾಧು ಕೋಕಿಲ ಪರ ಪ್ರಚಾರ ಮಾಡುತ್ತಿದ್ದಾರೆ. ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ (Congress) ಪ್ರಜಾಧ್ವನಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಮಾವೇಶ ನಡೆದಿದ್ದು, ಸಾಧು ಕೋಕಿಲ ಕೂಡ ಭಾಗವಹಿಸಿ ಮಾತನಾಡಿದ್ದಾರೆ. ‘ನಮಗೆ ಸ್ವಾತಂತ್ರ್ಯತಂದುಕೊಟ್ಟ ಪಕ್ಷ ಕಾಂಗ್ರೆಸ್’ ಎಂದು ಅವರು ಎದೆಯುಬ್ಬಿಸಿ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ