AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ; ಮಧು ಬಂಗಾರಪ್ಪ

ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ; ಮಧು ಬಂಗಾರಪ್ಪ

ರಾಮ್​, ಮೈಸೂರು
| Edited By: |

Updated on: May 23, 2026 | 4:27 PM

Share

ಸಚಿವ ಮಧು ಬಂಗಾರಪ್ಪ ಅವರು ಹಿಜಾಬ್ ವಿವಾದದ ಕುರಿತು ಮಾತನಾಡಿದ್ದು, ಸಮಾನತೆಗೆ ಒತ್ತು ನೀಡಿದರು. ಕೇಂದ್ರ ವಿದ್ಯಾಲಯದ ನಿಯಮಗಳನ್ನು ಉಲ್ಲೇಖಿಸಿ, ತಮ್ಮ ಇಲಾಖೆಯಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ನೀಟ್ ಪರೀಕ್ಷೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮ ಶೈಕ್ಷಣಿಕ ಹಿನ್ನೆಲೆ ಟೀಕೆಗಳಿಗೂ ಉತ್ತರ ನೀಡಿದರು.

ಮೈಸೂರು, ಮೇ 23: ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೇವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ‌. ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಸಮಾನತೆ ಸಂಕೇತ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ, ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ಎಂದಿದ್ದಾರೆ. ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್​ ಇದೆ ಎಂಬುದನ್ನು ಬಿಜೆಪಿಯವರು ಮೊದಲು ನೋಡಿಕೊಂಡು ಬರಲಿ ಎಂದು ಕಿಡಿಕಾರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More