AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಗರ ಮುಂಬಾಳು ಗ್ರಾಮದ ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್: ತಪ್ಪಿದ ಭಾರಿ ಅನಾಹುತ

ಸಾಗರ ಮುಂಬಾಳು ಗ್ರಾಮದ ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್: ತಪ್ಪಿದ ಭಾರಿ ಅನಾಹುತ

Basavaraj Yaraganavi
| Edited By: |

Updated on: Oct 08, 2026 | 10:42 AM

Share

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಬಾಳು ಗ್ರಾಮದ ಬಳಿ ಬೆಂಗಳೂರು-ಸಾಗರ ಮಾರ್ಗದ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಳಗ್ಗೆ 5.45ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಬಸ್‌ನ ಶೇ 80ರಷ್ಟು ಭಾಗ ಸುಟ್ಟುಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಿವಮೊಗ್ಗ, ಅಕ್ಟೋಬರ್ 8: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಬಾಳು ಗ್ರಾಮದ ಬಳಿ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಗಳೂರು-ಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದ ‘ಡ್ರೀಮ್’ ಖಾಸಗಿ ಬಸ್‌ನಲ್ಲಿ ಬೆಳಗ್ಗೆ 5.45ರ ಸುಮಾರಿಗೆ ಬೆಂಕಿ ಹೊತ್ತಿಕೊಂಡು ಧಗಧಗಿಸಿದೆ. ಬಸ್‌ನಲ್ಲಿ ಸಾಗರಕ್ಕೆ ತೆರಳುತ್ತಿದ್ದ ಇಬ್ಬರು ಪ್ರಯಾಣಿಕರು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕೆಳಗಿಳಿದಿದ್ದಾರೆ. ಉಳಿದ ಪ್ರಯಾಣಿಕರೆಲ್ಲರೂ ಶಿವಮೊಗ್ಗದಲ್ಲೇ ಇಳಿದಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಬೆಂಕಿ ತೀವ್ರವಾಗಿ ವ್ಯಾಪಿಸಿದ್ದು, ಬಸ್‌ನ ಸುಮಾರು ಶೇ 80ರಷ್ಟು ಭಾಗ ಸುಟ್ಟುಹೋಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Yaraganavi
Basavaraj Yaraganavi