ಅಪಘಾತದ ಬಳಿಕ ರಕ್ತದ ಮಡುವಿನಲ್ಲಿ ಕುಳಿತಿದ್ದ ಟಾಲಿವುಡ್ ಹೀರೋ ಸಾಯಿ ಧರಮ್ ತೇಜ್
ಅಪಘಾತದ ಪರಿಣಾಮ ಸಾಯಿ ಧರಮ್ ತೇಜ್ಗೆ ಗಂಭೀರ ಗಾಯಗಳಾಗಿದ್ದವು. ತೀವ್ರ ರಕ್ತಸ್ರಾವ ಕೂಡ ಆಗುತ್ತಿತ್ತು. ಆ ವೇಳೆ ಅವರು ರಸ್ತೆ ಬದಿಯಲ್ಲಿ ಕುಳಿತುಕೊಂಡಿದ್ದರು. ರಕ್ತದ ಮಡುವಿನಲ್ಲಿ ಅವರು ಕುಳಿತಿದ್ದ ವಿಡಿಯೋ ಲಭ್ಯವಾಗಿದೆ.
ತೆಲುಗು ನಟ ಸಾಯಿ ಧರಮ್ ತೇಜ್ ಅವರಿಗೆ ಅಪಘಾತ ಆಗಿರುವುದು ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ. ಸದ್ಯ ಹೈದರಾಬಾದ್ನ ಅಪೋಲೋ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವುದು ಎಲ್ಲರಿಗೂ ಆತಂಕ ಮೂಡಿಸಿದೆ. ಅತಿ ವೇಗದಿಂದ ಸ್ಪೋರ್ಟ್ಸ್ ಬೈಕ್ ಓಡಿಸಿದ್ದೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಅಪಘಾತದ ಬಳಿಕ ಅವರ ಪರಿಸ್ಥಿತಿ ಹೇಗಿತ್ತು ಎಂಬುದನ್ನು ವಿವರಿಸುವ ವಿಡಿಯೋ ಕೂಡ ಈಗ ಲಭ್ಯವಾಗಿದೆ.
ಸೆ.10ರ ರಾತ್ರಿ 8 ಗಂಟೆಗೆ ಈ ಅಪಘಾತ ಸಂಭವಿಸಿತ್ತು. ಪರಿಣಾಮ ಸಾಯಿ ಧರಮ್ ತೇಜ್ಗೆ ಗಂಭೀರ ಗಾಯಗಳಾಗಿದ್ದವು. ತೀವ್ರ ರಕ್ತಸ್ರಾವ ಕೂಡ ಆಗುತ್ತಿತ್ತು. ಆ ವೇಳೆ ಅವರು ರಸ್ತೆ ಬದಿಯಲ್ಲಿ ಕುಳಿತುಕೊಂಡಿದ್ದರು. ರಕ್ತದ ಮಡುವಿನಲ್ಲಿ ಅವರು ಕುಳಿತಿದ್ದ ವಿಡಿಯೋ ವೈರಲ್ ಆಗಿದೆ. ಸದ್ಯ ಸಾಯಿ ಧರಮ್ ತೇಜ್ಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಟಾಲಿವುಡ್ನ ಹಲವರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
ಇದನ್ನೂ ಓದಿ:
ಸಾಯಿ ಧರಮ್ ತೇಜ್ ಬೈಕ್ ಅಪಘಾತ: ಅಪಶಕುನ ನುಡಿದ ಹಿರಿಯ ನಟನ ವಿರುದ್ಧ ಭಾರಿ ಆಕ್ರೋಶ
ಡಿಕೆ ರವಿ ಬಗ್ಗೆ 2 ದಿನದ ಹಿಂದೆ ಮಾತಾಡಿದ್ದ ಸಾಯಿ ಧರಮ್ ತೇಜ್ಗೆ ಭೀಕರ ಅಪಘಾತ; ಏನಿದು ಕಾಕತಾಳೀಯ?