ಭರ್ಜರಿ ಸೆಂಚುರಿ ಸಿಡಿಸಿ ಪಂದ್ಯ ಗೆಲ್ಲಿಸಿದ ಸಾಯಿ ಸುದರ್ಶನ್
Sai Sudharsan: 184 ರನ್ಗಳ ಕಠಿಣ ಗುರಿ ಬೆನ್ನತ್ತಿದ ತಮಿಳುನಾಡು ಪರ ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ ಆಕರ್ಷಕ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ಗೆ ಒತ್ತು ನೀಡಿದ್ದ ಸಾಯಿ ನಿಧಾನಕ್ಕೆ ರನ್ ಗಳಿಸುತ್ತಾ ಸಾಗಿದರು. ಆದರೆ ಅರ್ಧಶತಕದ ಬೆನ್ನಲ್ಲೇ ಬ್ಯಾಟಿಂಗ್ ಗೇರ್ ಬದಲಿಸಿದ ಎಡಗೈ ದಾಂಡಿಗ 55 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ 101 ರನ್ ಬಾರಿಸಿದರು.
ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ಸಾಯಿ ಸುದರ್ಶನ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ತಮಿಳುನಾಡು ಹಾಗೂ ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌರಾಷ್ಟ್ರ ತಂಡದ ಬ್ಯಾಟರ್ಗಳು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿದ್ದರು.
184 ರನ್ಗಳ ಕಠಿಣ ಗುರಿ ಬೆನ್ನತ್ತಿದ ತಮಿಳುನಾಡು ಪರ ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ ಆಕರ್ಷಕ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ಗೆ ಒತ್ತು ನೀಡಿದ್ದ ಸಾಯಿ ನಿಧಾನಕ್ಕೆ ರನ್ ಗಳಿಸುತ್ತಾ ಸಾಗಿದರು.
ಆದರೆ ಅರ್ಧಶತಕದ ಬೆನ್ನಲ್ಲೇ ಬ್ಯಾಟಿಂಗ್ ಗೇರ್ ಬದಲಿಸಿದ ಎಡಗೈ ದಾಂಡಿಗ 55 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ 101 ರನ್ ಬಾರಿಸಿದರು. ಸಾಯಿ ಸುದರ್ಶನ್ ಬಾರಿಸಿದ ಈ ಅಜೇಯ ಶತಕದ ನೆರವಿನೊಂದಿಗೆ ತಮಿಳುನಾಡು ತಂಡವು 18.4 ಓವರ್ಗಳಲ್ಲಿ 185 ರನ್ ಬಾರಿಸಿ 3 ವಿಕೆಟ್ಗಳ ಜಯ ಸಾಧಿಸಿತು.