೬೭ ಎಸೆತಗಳಲ್ಲಿ ಪಂದ್ಯ ಮುಗಿಸಿದ ಲೂಸಿಯಾ ಕಿಂಗ್ಸ್
Saint Lucia Kings vs Trinbago Knight Riders: 110 ರನ್ ಗಳ ಗುರಿ ಬೆನ್ನತ್ತಿದ ಸೇಂಟ್ ಲೂಸಿಯಾ ಕಿಂಗ್ಸ್ ತಂಡಕ್ಕೆ ಟಿಮ್ ಸೈಫರ್ಟ್ (36) ಸ್ಫೋಟಕ ಆರಂಭ ಒದಗಿಸಿದರು. ಆ ಬಳಿಕ ಬಂದ ರೋಸ್ಟನ್ ಚೇಸ್ (27) ಹಾಗೂ ಅಕೀಮ್ ಆಗಸ್ಟೆ (28) ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ ಸೇಂಟ್ ಲೂಸಿಯಾ ಕಿಂಗ್ಸ್ 67 ಎಸೆತಗಳಲ್ಲಿ ಗುರಿ ಬೆನ್ನತ್ತಿ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ವೆಸ್ಟ್ ಇಂಡೀಸ್ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್‌ನ 20ನೇ ಪಂದ್ಯದಲ್ಲಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಅದು ಸಹ ಬಲಿಷ್ಠ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ ಎಂಬುದು ವಿಶೇಷ.
ಟ್ರಿನಿಡಾಡ್ ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೇಂಟ್ ಲೂಸಿಯಾ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವು ರನ್ ಗಳಿಸಲು ಪರದಾಡಿದರು.
ಪರಿಣಾಮ ಪವರ್ ಪ್ಲೇನಲ್ಲಿ 3 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 40 ರನ್ ಗಳು ಮಾತ್ರ. ಈ ಹಂತದಲ್ಲಿ ದಾಳಿಗಿಳಿದ ಸ್ಪಿನ್ನರ್ ತಬ್ರೇಝ್ ಶಂಸಿ 4 ಓವರ್‌ಗಳಲ್ಲಿ ಕೇವಲ 12 ರನ್ ನೀಡಿ 3 ವಿಕೆಟ್ ಪಡೆದರು. ಇದರಿಂದಾಗಿ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವು 18.1 ಓವರ್‌ಗಳಲ್ಲಿ 109 ರನ್ ಗಳಿಸಿ ಆಲೌಟ್ ಆಯಿತು.
110 ರನ್ ಗಳ ಗುರಿ ಬೆನ್ನತ್ತಿದ ಸೇಂಟ್ ಲೂಸಿಯಾ ಕಿಂಗ್ಸ್ ತಂಡಕ್ಕೆ ಟಿಮ್ ಸೈಫರ್ಟ್ (36) ಸ್ಫೋಟಕ ಆರಂಭ ಒದಗಿಸಿದರು. ಆ ಬಳಿಕ ಬಂದ ರೋಸ್ಟನ್ ಚೇಸ್ (27) ಹಾಗೂ ಅಕೀಮ್ ಆಗಸ್ಟೆ (28) ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ ಸೇಂಟ್ ಲೂಸಿಯಾ ಕಿಂಗ್ಸ್ 67 ಎಸೆತಗಳಲ್ಲಿ ಗುರಿ ಬೆನ್ನತ್ತಿ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
