ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಅಸ್ವಸ್ಥ; ಒಬ್ಬರ ಸ್ಥಿತಿ ಗಂಭೀರ!

Edited By:

Updated on: Mar 28, 2026 | 6:25 PM

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೀನಹಳ್ಳಿ ಗ್ರಾಮದ ಕಾಫಿ ತೋಟದಲ್ಲಿ ಭಾರಿ ಗುಡುಗು ಸಹಿತ ಮಳೆ ಸಂದರ್ಭದಲ್ಲಿ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ರೂಪಾ, ಲಕ್ಷ್ಮಿ, ಸುಮಿತ್ರಾ, ಜಯಮ್ಮ ಸೇರಿದಂತೆ ಐವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಗಾಯಗೊಂಡವರನ್ನು ತಕ್ಷಣ ಸಕಲೇಶಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಸಕಲೇಶಪುರ, ಮಾ.28: ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಬಿರುಗಾಳಿ ಮಳೆ ಅಬ್ಬರಿಸುತ್ತಿದ್ದು, ಸಕಲೇಶಪುರ ತಾಲೂಕಿನ ದೀನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಕುದರಂಗಿ ಗ್ರಾಮದ ಕಾರ್ಮಿಕ ಮಹಿಳೆಯರಾದ ರೂಪಾ, ಲಕ್ಷ್ಮಿ, ಸುಮಿತ್ರಾ ಮತ್ತು ಜಯಮ್ಮ ಸೇರಿದಂತೆ ಐವರು ದೀನಹಳ್ಳಿ ಗ್ರಾಮದ ಕಾಫಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಆಕಸ್ಮಿಕವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಐವರು ಮಹಿಳೆಯರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.ಗಾಯಗೊಂಡವರನ್ನು ಕೂಡಲೇ ಸಕಲೇಶಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ರೂಪಾ ಎಂಬ ಕಾರ್ಮಿಕ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ನಿಗಾ ವಹಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More