AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲೆ ಘಾಟ್​ನಲ್ಲಿ 20 ಅಡಿ ಎತ್ತರದಿಂದ ಉರುಳಿದ ಮದುವೆ ದಿಬ್ಬಣದ ಮ್ಯಾಕ್ಸಿಕ್ಯಾಬ್; 20 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಬಿಸಿಲೆ ಘಾಟ್​ನಲ್ಲಿ 20 ಅಡಿ ಎತ್ತರದಿಂದ ಉರುಳಿದ ಮದುವೆ ದಿಬ್ಬಣದ ಮ್ಯಾಕ್ಸಿಕ್ಯಾಬ್; 20 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಮಂಜುನಾಥ ಕೆಬಿ
| Updated By: Ganapathi Sharma|

Updated on: Oct 30, 2025 | 12:16 PM

Share

ಮದುವೆ ದಿಬ್ಬಣದ ಮ್ಯಾಕ್ಸಿಕ್ಯಾಬ್ 20 ಅಡಿ ಎತ್ತರದಿಂದ ಪಲ್ಟಿಯಾದ ಕಾರಣ 20 ಮಂದಿ ಗಾಯಗೊಂಡ ಘಟನೆ ಹಾಸನ‌ ಜಿಲ್ಲೆ ಸಕಲೇಶಪುರ ತಾಲೂಕಿನ ಬಿಸಿಲೆಘಾಟ್​ನಲ್ಲಿ ನಡೆದಿದೆ. ಅದೃಷ್ಟವಶಾತ್ ಸಾವು ಸಂಭವಿಸಿಲ್ಲ. ಗಾಯಾಳುಗಳ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಕಲೇಶಪುರ ತಾಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನ, ಅಕ್ಟೋಬರ್ 30: ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಮದುವೆ ದಿಬ್ಬಣದ ಮ್ಯಾಕ್ಸಿಕ್ಯಾಬ್ ಹಾಸನ‌ ಜಿಲ್ಲೆ ಸಕಲೇಶಪುರ ತಾಲೂಕಿನ ಬಿಸಿಲೆಘಾಟ್​ನಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಪಲ್ಟಿಯಾದ ಪರಿಣಾಮ 20 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಕಲೇಶಪುರ ತಾಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ. ಮ್ಯಾಕ್ಸಿ ಕ್ಯಾಬ್ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ