ಬಿಸಿಲೆ ಘಾಟ್ನಲ್ಲಿ 20 ಅಡಿ ಎತ್ತರದಿಂದ ಉರುಳಿದ ಮದುವೆ ದಿಬ್ಬಣದ ಮ್ಯಾಕ್ಸಿಕ್ಯಾಬ್; 20 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ
ಮದುವೆ ದಿಬ್ಬಣದ ಮ್ಯಾಕ್ಸಿಕ್ಯಾಬ್ 20 ಅಡಿ ಎತ್ತರದಿಂದ ಪಲ್ಟಿಯಾದ ಕಾರಣ 20 ಮಂದಿ ಗಾಯಗೊಂಡ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಿಸಿಲೆಘಾಟ್ನಲ್ಲಿ ನಡೆದಿದೆ. ಅದೃಷ್ಟವಶಾತ್ ಸಾವು ಸಂಭವಿಸಿಲ್ಲ. ಗಾಯಾಳುಗಳ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಕಲೇಶಪುರ ತಾಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ.
ಹಾಸನ, ಅಕ್ಟೋಬರ್ 30: ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಮದುವೆ ದಿಬ್ಬಣದ ಮ್ಯಾಕ್ಸಿಕ್ಯಾಬ್ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಿಸಿಲೆಘಾಟ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಪಲ್ಟಿಯಾದ ಪರಿಣಾಮ 20 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಕಲೇಶಪುರ ತಾಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ. ಮ್ಯಾಕ್ಸಿ ಕ್ಯಾಬ್ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.