ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ

MS Dhoni Birthday: ಭಾರತ ತಂಡ ಕಂಡಂತಹ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತಮ್ಮ 43ನೇ ಜನ್ಮದಿನವನ್ನು ಧೋನಿ ಪತ್ನಿ ಸಾಕ್ಷಿಯೊಂದಿಗೆ ಆಚರಿಸಿಕೊಂಡಿದ್ದಾರೆ. ಈ ಹುಟ್ಟುಹಬ್ಬದ ಸಂಭ್ರಮದ ವಿಡಿಯೋವನ್ನು ಸಾಕ್ಷಿ ಧೋನಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಇದೀಗ ಈ ವಿಡಿಯೋ ಭಾರೀ ವೈರಲ್ ಆಗಿದೆ.

ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
|

Updated on: Jul 07, 2024 | 8:55 AM

ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ (MS Dhoni) ಇಂದು 43ನೇ ಹುಟ್ಟುಹಬ್ಬ. ಈ ಜನ್ಮದಿನದ ಸಂಭ್ರಮವನ್ನು ಪತ್ನಿ ಸಾಕ್ಷಿ ಸಖತ್ ಆಗಿಯೇ ಸೆಲೆಬ್ರೇಟ್ ಮಾಡಿದ್ದಾರೆ. ಅನಂತ್ ಅಂಬಾನಿ ಮದುವೆ ನಿಮಿತ್ತ ಮುಂಬೈನಲ್ಲಿರುವ ಧೋನಿ ದಂಪತಿ ಹೊಟೇಲ್​ ರೂಮ್​ನಲ್ಲಿ ಆಪ್ತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಕೇಕ್ ಕಟ್ಟಿಂಗ್ ಬಳಿಕ ಸಾಕ್ಷಿ ಮಹೇಂದ್ರ ಸಿಂಗ್ ಧೋನಿ ಅವರ ಪಾದ ಮುಟ್ಟಿ ನಮಸ್ಕರಿಸಿದರು. ಅತ್ತ ಪತ್ನಿಯು ಆಶೀರ್ವಾದ ಪಡೆಯುತ್ತಿದ್ದಂತೆ ಇತ್ತ ಧೋನಿಯು ಗೆದ್ದು ಬಾ ಎನ್ನುವ ಮೂಲಕ ಕಾಲೆಳೆದಿದ್ದಾರೆ. ಇದೀಗ ಧೋನಿ ದಂಪತಿಯ ಈ ಫನ್ನಿ ವಿಡಿಯೋವನ್ನು ಸಾಕ್ಷಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸೂಪರ್ ಸ್ಟಾರ್ ರಜನಿಕಾಂತ್ ಅವರ ಜೈಲರ್ ಚಿತ್ರದ ತಲೈವರ್ ಅಲೆಪ್ಪರ ಹಾಡಿನೊಂದಿಗೆ ಪೋಸ್ಟ್ ಮಾಡಲಾದ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಅಭಿಮಾನಿಗಳು ತಲಾ ಧೋನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

2020 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಮಹೇಂದ್ರ ಸಿಂಗ್ ಧೋನಿ ಐಪಿಎಲ್​​ನಲ್ಲಿ ಮುಂದುವರೆದಿದ್ದಾರೆ. ಆದರೆ ಕಳೆದ ಬಾರಿ ಸಿಎಸ್​ಕೆ ತಂಡದ ನಾಯಕತ್ವ ತ್ಯಜಿಸುವ ಮೂಲಕ ಅಚ್ಚರಿ ಮೂಡಿಸಿದ್ದರು. ಇದೀಗ ಸಿಎಸ್​ಕೆ ತಂಡವನ್ನು ರುತುರಾಜ್ ಗಾಯಕ್ವಾಡ್ ಮುನ್ನಡೆಸುತ್ತಿದ್ದು, ಹೀಗಾಗಿ 2025 ರ ಐಪಿಎಲ್​ನಲ್ಲಿ 43 ವರ್ಷದ ಮಹೇಂದ್ರ ಸಿಂಗ್ ಧೋನಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಈಗ ಕುತೂಹಲ.

Follow us
ಚಾಮರಾಜನಗರ: ಸೆಲ್ಫಿ ಶೋಕಿಗೆ ಡೆಡ್ಲಿ ಸ್ಪಾಟ್ ತಲುಪಿ ಪ್ರವಾಸಿಗರ ಹುಚ್ಚಾಟ!
ಚಾಮರಾಜನಗರ: ಸೆಲ್ಫಿ ಶೋಕಿಗೆ ಡೆಡ್ಲಿ ಸ್ಪಾಟ್ ತಲುಪಿ ಪ್ರವಾಸಿಗರ ಹುಚ್ಚಾಟ!
ನಟಿಯರ ಕ್ರಿಕೆಟ್: ರೋಷಾವೇಷದಲ್ಲಿ ಬ್ಯಾಟ್ ಬೀಸಿದ ಸಪ್ತಮಿ ಗೌಡ
ನಟಿಯರ ಕ್ರಿಕೆಟ್: ರೋಷಾವೇಷದಲ್ಲಿ ಬ್ಯಾಟ್ ಬೀಸಿದ ಸಪ್ತಮಿ ಗೌಡ
ಕನ್ನಡಿಗರ ಉದ್ಯೋಗ ಮೀಸಲಾತಿಗೆ ವಿರೋಧಿಸಿದ ಕಿರಣ್ ಮಜುಂದಾರ್ ಸಂಸ್ಥೆಗೆ ಮಸಿ
ಕನ್ನಡಿಗರ ಉದ್ಯೋಗ ಮೀಸಲಾತಿಗೆ ವಿರೋಧಿಸಿದ ಕಿರಣ್ ಮಜುಂದಾರ್ ಸಂಸ್ಥೆಗೆ ಮಸಿ
ತಮಿಳುನಾಡಿನೊಂದಿಗಿನ ನೀರು ಸಂಘರ್ಷಕ್ಕೆ 1 ವರ್ಷ ವಿರಾಮ: ಕುಮಾರಸ್ವಾಮಿ
ತಮಿಳುನಾಡಿನೊಂದಿಗಿನ ನೀರು ಸಂಘರ್ಷಕ್ಕೆ 1 ವರ್ಷ ವಿರಾಮ: ಕುಮಾರಸ್ವಾಮಿ
ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಹೆಚ್​ಡಿಕೆ ಎಚ್ಚರಿಕೆ
ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಹೆಚ್​ಡಿಕೆ ಎಚ್ಚರಿಕೆ
ಪ್ರತಿ ಭಾನುವಾರ ಫ್ಯಾಮಿಲಿ ಬದಲು ಫ್ಯಾನ್ಸ್​ಗೆ ಸಮಯ ಮೀಸಲು: ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾಮಿಲಿ ಬದಲು ಫ್ಯಾನ್ಸ್​ಗೆ ಸಮಯ ಮೀಸಲು: ಧ್ರುವ ಸರ್ಜಾ
ತಮಿಳುನಾಡಿನ ನೀರಿನ ದಾಹ ತಣಿಸಿದ ಕಾವೇರಿ, ಎಷ್ಟು ಹರಿಯುತ್ತಿದೆ ಎಂದು ನೋಡಿ
ತಮಿಳುನಾಡಿನ ನೀರಿನ ದಾಹ ತಣಿಸಿದ ಕಾವೇರಿ, ಎಷ್ಟು ಹರಿಯುತ್ತಿದೆ ಎಂದು ನೋಡಿ
ವಿಡಿಯೋ: ದರ್ಶನ್ ಪ್ರಕರಣದ ಬಗ್ಗೆ ಕೊನೆಗೂ ಮಾತನಾಡಿದ ನಟ ಧ್ರುವ ಸರ್ಜಾ
ವಿಡಿಯೋ: ದರ್ಶನ್ ಪ್ರಕರಣದ ಬಗ್ಗೆ ಕೊನೆಗೂ ಮಾತನಾಡಿದ ನಟ ಧ್ರುವ ಸರ್ಜಾ
ಮೈ ತುಂಬಿ ಹರಿಯುತ್ತಿದೆ ಧನುಷ್ ಕೋಟಿ; ಚುಂಚನಕಟ್ಟೆ ಫಾಲ್ಸ್ ವಿಡಿಯೋ ನೋಡಿ
ಮೈ ತುಂಬಿ ಹರಿಯುತ್ತಿದೆ ಧನುಷ್ ಕೋಟಿ; ಚುಂಚನಕಟ್ಟೆ ಫಾಲ್ಸ್ ವಿಡಿಯೋ ನೋಡಿ
10 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿ ದಾಖಲೆ ಬರೆದ ಮಾರ್ನಸ್ ಲಾಬುಶೇನ್
10 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿ ದಾಖಲೆ ಬರೆದ ಮಾರ್ನಸ್ ಲಾಬುಶೇನ್