ಸಾಲುಮರದ ತಿಮ್ಮಕ್ಕಗೆ 3 ಸುತ್ತು ಕುಶಾಲತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಿದ ಪೊಲೀಸರು

Updated on: Nov 15, 2025 | 3:03 PM

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದರು. ಬಂದೂಕುಪಡೆ ಸಿಬ್ಬಂದಿಗಳು ಗೌರವ ರಕ್ಷೆ ಮತ್ತು ಶೋಕ ಶಸ್ತ್ರಗಳ ಮೂಲಕ ಅಂತಿಮ ನಮನ ಸಲ್ಲಿಸಿದರು. ಈ ಗೌರವವು ಅವರ ಸಮಾಜಮುಖಿ ಕಾರ್ಯಕ್ಕೆ ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು.

ಬೆಂಗಳೂರು, ನವೆಂಬರ್ 15:  ಶುಕ್ರವಾರ  ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ವಿಧಿವಶಹೊಂದಿದ ಹಿನ್ನೆಲೆ ಬೆಂಗಳೂರು ಪೋಲಿಸರು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಈ ವೇಳೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ಪೊಲೀಸರು ತಿಮ್ಮಕ್ಕ ಅವರಿಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More