ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?: ವೈದ್ಯರು ಹೇಳಿದ್ದಿಷ್ಟು

Updated on: Nov 14, 2025 | 2:56 PM

ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (114) ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದು, ನವೆಂಬರ್ 2 ರಂದು ಉಸಿರಾಟದ ಸಮಸ್ಯೆಯಿಂದ ತಿಮ್ಮಕ್ಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 12 ಗಂಟೆಗೆ ಬಹುಅಂಗಾಂಗ ವೈಫಲ್ಯದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರು, ನವೆಂಬರ್​ 14: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದು, ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಜಯನಗರದ ಅಪೋಲೋ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಗೋವಿಂದಯ್ಯ ಯತೀಶ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನವೆಂಬರ್ 2ರಂದು ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಲಂಗ್ಸ್​ ಇನ್ಫೆಕ್ಷನ್ ಆಗಿತ್ತು. ವೈದ್ಯರು ಚಿಕಿತ್ಸೆ ನೀಡುವಾಗ ಅವರು ಬಹಳ ವಿನಯದಿಂದ ನಡೆದುಕೊಳ್ಳುತ್ತಿದ್ದರು. ಸಾಲುಮರದ ತಿಮ್ಮಕ್ಕರನ್ನು ಉಳಿಸಿಕೊಳ್ಳಬೇಕೆಂದು ನಾವು ಬಹಳ ಪ್ರಯತ್ನ ಮಾಡಿದೆವು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಬಹುಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ ಎಂದು ಡಾ.ಗೋವಿಂದಯ್ಯ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.