ಶಾಸಕರಾದ ಬಳಿಕ ಮೊದಲ ಸಭೆಗೆ ಲ್ಯಾಪ್​​ಟಾಪ್ ಹಿಡಿದು ಬಂದ ಸಮರ್ಥ್, ಕುಡಿಯುವ ನೀರಿಗೆ ಒತ್ತು

Edited By:

Updated on: May 15, 2026 | 7:01 PM

ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಮರ್ಥ್ ಶಾಮನೂರು (Samarth Shamanur) ಮೊದಲ ಬಾರಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ದಾವಣಗೆರೆ (Davanagere) ನಗರದ ಅರುಣಾ ಸರ್ಕಲ್ ಬಳಿ ಇರುವ ಪಶುಸಂಗೋಪನೆ ಇಲಾಖೆ ಸಭಾಂಗಣದಲ್ಲಿ ಸಭೆ ನಡೆದಿದ್ದು, ಅಧಿಕಾರಿಗಳು ನೀಡಿದ ಮಾಹಿತಿಯನ್ನು ಲ್ಯಾಪ್​ಟಾಪ್​​ನಲ್ಲಿ ದಾಖಲು ಮಾಡಿಕೊಂಡರು. ಇನ್ನು ಸಭೆಯಲ್ಲಿ ಪ್ರಮುಖವಾಗಿ ಯಾವ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎನ್ನುವ ಬಗ್ಗೆ ಚರ್ಚಿಸಿದ್ದು,‌ ತಕ್ಷಣಕ್ಕೆ ನಾಲ್ಕು ಕಡೆ ಬೋರ್ ವೆಲ್ ಕೊರೆಯಿಸಲು ನಿರ್ಧರಿಸಲಾಗಿದೆ.

ದಾವಣಗೆರೆ, (ಮೇ 15): ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಮರ್ಥ್ ಶಾಮನೂರು (Samarth Shamanur) ಮೊದಲ ಬಾರಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಿನ್ನೆ (ಮೇ 14) ವಿಧಾನಸೌಧಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಮರ್ಥ್ ಮರುದಿನವೇ ಅಂದರೆ ಇಂದು (ಮೇ 15) ಅಧಿಕಾರಿಗಳ ಸಭೆ ನಡೆಸಿ ಗಮನಸೆಳೆದಿದ್ದಾರೆ. ದಾವಣಗೆರೆ (Davanagere) ನಗರದ ಅರುಣಾ ಸರ್ಕಲ್ ಬಳಿ ಇರುವ ಪಶುಸಂಗೋಪನೆ ಇಲಾಖೆ ಸಭಾಂಗಣದಲ್ಲಿ ಸಭೆ ನಡೆದಿದ್ದು, ಅಧಿಕಾರಿಗಳು ನೀಡಿದ ಮಾಹಿತಿಯನ್ನು ಲ್ಯಾಪ್​ಟಾಪ್​​ನಲ್ಲಿ ದಾಖಲು ಮಾಡಿಕೊಂಡರು. ಇನ್ನು ಸಭೆಯಲ್ಲೇ ಪ್ರಮುಖವಾಗಿ ಕುಡಿಯುವ ನೀರಿಗೆ ಒತ್ತು ಕೊಟ್ಟಿರುವುದು ವಿಶೇಷ.

ಹೌದು..ಯಾವ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎನ್ನುವ ಬಗ್ಗೆ ಚರ್ಚಿಸಿದ್ದು,‌   ತಕ್ಷಣಕ್ಕೆ ನಾಲ್ಕು ಕಡೆ ಬೋರ್ ವೆಲ್ ಕೊರೆಯಿಸಲು ನಿರ್ಧರಿಸಲಾಗಿದೆ. ಇನ್ನು ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಾಸಕ ಸಮರ್ಥ್, ಅಧಿಕಾರಿಗಳು, ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳು ನೀಡುವ ಮಾಹಿತಿ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುವೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 15, 2026 05:47 PM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More