ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ (Samsung) ಕಂಪನಿ ಭಾರತದಲ್ಲಿ ತನ್ನ ಹೊಸ ಗ್ಯಾಲಕ್ಸಿ ಟ್ಯಾಬ್ A8 (Samsung Galaxy Tab A8) ಅನ್ನು ಲಾಂಚ್ ಮಾಡಿದೆ. ಇದು ಈ ಟ್ಯಾಬ್ 10.5 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಯುನಿಸಾಕ್ ಟೈಗರ್ T618 ಚಿಪ್‌ಸೆಟ್ ಹೊಂದಿದ್ದು, ಕ್ವಾಡ್ ಸ್ಪೀಕರ್ ಸೆಟಪ್ ಅನ್ನು ಒಳಗೊಂಡಿದೆ. 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಸೆಲ್ಫಿಗಳು ಮತ್ತು ವಿಡಿಯೋ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. 7,040 mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಜೊತೆಗೆ ಟ್ಯಾಬ್ಲೆಟ್ 7.5W ಚಾರ್ಜರ್‌ನೊಂದಿಗೆ ಬರುತ್ತದೆ. ಈ ಟ್ಯಾಬ್ ಅಮೇಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ಮತ್ತು ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಸಮಯದಲ್ಲಿ ಖರೀದಿಸಲು ಲಭ್ಯವಿರುತ್ತದೆ. ಈ ಎರಡು ಸೇಲ್‌ಗಳು ಇದೇ ಜನವರಿ 17 ರಂದು ಪ್ರಾರಂಭವಾಗಲಿವೆ. ಇದರ 3GB RAM ಮತ್ತು 32GB ಹಾಗೂ 4GB RAM ಮತ್ತು 64GB ಸ್ಟೋರೇಂಜ್ ವೇರಿಯೆಂಟ್ ಆಯ್ಕೆಯಲ್ಲಿ ಲಭ್ಯವಿದೆ. ಇದರ ಆರಂಭಿಕ ಬೆಲೆ 17,999ರೂ. ಆಗಿದೆ.
OnePlus 9RT: ಭಾರತದಲ್ಲಿಂದು ಬಹುನಿರೀಕ್ಷಿತ ಒನ್ಪ್ಲಸ್ 9RT ಫೋನ್ ಲಾಂಚ್: ಬೆಲೆ ಎಷ್ಟು?, ಏನು ವಿಶೇಷತೆ?
Oppo A36: 5000mAh ಬ್ಯಾಟರಿ, ಬಲಿಷ್ಠ ಪ್ರೊಸೆಸರ್: ಬಜೆಟ್ ಬೆಲೆಗೆ ಒಪ್ಪೋ A36 ಸ್ಮಾರ್ಟ್ಫೋನ್ ಬಿಡುಗಡೆ