AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿ ‘ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮ, ಮಕ್ಕಳು ಸೇರಿದಂತೆ ಎಲ್ಲರೂ ಸಂವಿಧಾನದ ಪೀಠಿಕೆ ತಿಳಿದುಕೊಳ್ಳಬೇಕು ಎಂದ ಸಿಎಂ ಸಿದ್ದರಾಮಯ್ಯ

ವಿಧಾನಸೌಧದಲ್ಲಿ ‘ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮ, ಮಕ್ಕಳು ಸೇರಿದಂತೆ ಎಲ್ಲರೂ ಸಂವಿಧಾನದ ಪೀಠಿಕೆ ತಿಳಿದುಕೊಳ್ಳಬೇಕು ಎಂದ ಸಿಎಂ ಸಿದ್ದರಾಮಯ್ಯ

Anil Kalkere
| Updated By: ಆಯೇಷಾ ಬಾನು|

Updated on: Sep 15, 2023 | 11:16 AM

Share

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗ ‘ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸಿಎಂ ಚಾಲನೆ ಕೊಟ್ಟರು. ಸಂವಿಧಾನ ರಚನೆ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆ ಅಧಿಕೃತವಾಗಿ ಜಾರಿಯಾಗಿದೆ. ಮಕ್ಕಳು ಸೇರಿದಂತೆ ಎಲ್ಲರೂ ಸಂವಿಧಾನದ ಪೀಠಿಕೆ ತಿಳಿದುಕೊಳ್ಳಬೇಕು ಎಂದು ಸಿಎಂ ಹೇಳಿದರು.

ಬೆಂಗಳೂರು, ಸೆ.15: ವಿಧಾನಸೌಧದಲ್ಲಿ ‘ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಕೊಟ್ಟಿದ್ದಾರೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗ ‘ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸಿಎಂ ಚಾಲನೆ ಕೊಟ್ಟರು. ಜಾಗತಿಕ ವಾಚಕರ ಸರ್ವ ಜನರ ಏಕ ಧ್ವನಿ ಶೀರ್ಷಿಕೆಯಡಿ ಕಾರ್ಯಕ್ರಮ ನಡೆಯುತ್ತಿದ್ದು ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​, ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್​.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ್​, ಸತೀಶ್​ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್​ ಖರ್ಗೆ, ಕೆ.ಹೆಚ್​.ಮುನಿಯಪ್ಪ, ಕೆ.ಜೆ.ಜಾರ್ಜ್​, ಶಿವರಾಜ್ ತಂಗಡಗಿ, ನಾಗೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ.

ಕಾರ್ಯಕ್ರಮ ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡಿದರು. ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡುತ್ತಿದ್ದೇವೆ. ವಿಶ್ವದ ಅನೇಕ ದೇಶಗಳಲ್ಲಿ ಪ್ರಜಾಪ್ರಭುತ್ವ ದಿನ ಆಚರಣೆ ಮಾಡುತ್ತಿದ್ದಾರೆ. ಸಿಂಧೂ ನಾಗರಿಕತೆ ಕಾಲದಿಂದಲೂ ಪ್ರಜಾಪ್ರಭುತ್ವದ ವ್ಯವಸ್ಥೆ ಇತ್ತು. ಬುದ್ಧ, ಬಸವಣ್ಣ ಅವಧಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿ ಇತ್ತು. ಹಿಂದೆ ಗಣತಂತ್ರ ಅಂತಾ ಕರೆಯಲಾಗುತ್ತಿತ್ತು. ಜಗತ್ತಿನ ಅನೇಕ ರಾಷ್ಟ್ರಗಳು ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡಿದೆ. ಸಂವಿಧಾನ ರಚನೆ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆ ಅಧಿಕೃತವಾಗಿ ಜಾರಿಯಾಗಿದೆ. ಮಕ್ಕಳು ಸೇರಿದಂತೆ ಎಲ್ಲರೂ ಸಂವಿಧಾನದ ಪೀಠಿಕೆ ತಿಳಿದುಕೊಳ್ಳಬೇಕು. ಆರ್ಥಿಕ, ಸಾಮಾಜಿಕವಾಗಿ‌ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ. ಅವಕಾಶ ವಂಚಿತರ ಪರವಾಗಿ ನಾವು ಕೆಲಸ ಮಾಡುತ್ತಿದ್ದೇವೆ. 5 ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ನಾವೆಲ್ಲರೂ ಉಳಿದ ಹಾಗೆ. ಮಕ್ಕಳಿಗೂ ಸಹ ಸಂವಿಧಾನದ ಅರಿವು ಇರಬೇಕು. ಶಾಲಾ-ಕಾಲೇಜುಗಳಲ್ಲೂ ಸಂವಿಧಾನದ ಬಗ್ಗೆ ತಿಳಿಸಿಕೊಡಬೇಕು. ಸಂವಿಧಾನ ವಿರೋಧ ಮಾಡುವವರ ಬಗ್ಗೆ ಜಾಗೃತರಾಗಿ ಇರಬೇಕು ಎಂದರು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ