ಸಂಯುಕ್ತ ಪಾಟೀಲ್ ಪತಿ ಬೀದರ್​ನವರು, ಆ ಲೋಕಸಭಾ ಕ್ಷೇತ್ರದ ಟಿಕೆಟ್ ಯಾಕೆ ಹೈಕಮಾಂಡ್ ಅವರಿಗೆ ನೀಡಲಿಲ್ಲ? ವೀಣಾ ಕಾಶಪ್ಪನವರ್

Updated on: Mar 29, 2024 | 3:00 PM

ಸಂಸತ್ ಚುನಾವಣೆಯ ಬಳಿಕ ಯಾವುದಾದರೂ ಸ್ಥಾನಮಾನ ನೀಡುವ ಬಗ್ಗೆ ಮುಖ್ಯಮಂತ್ರಿ ಭರವಸೆ ನೀಡಿಲ್ಲ ಎಂದ ವೀಣಾ ತನಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಳಿದ್ದರೂ ಸಂಸದೆಯಾಗಬೇಕೆಂಬ ಅದಮ್ಯ ಹಂಬಲದಿಂದ ಅದನ್ನು ನಿರಾಕರಿಸಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಕಾಯುತ್ತಿದ್ದೆ ಅಂತ ಹೇಳಿದರು.

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಮಾಧ್ಯಮಗಳ ಕಣ್ಣಿಗೆ ಬೀಳದ ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ (Veena Kashappanavar) ಇಂದು ಬೆಂಗಳೂರಲ್ಲಿ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದರು. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ ಗೆ (Samyukta Patil) ನೀಡಿದ್ದಕ್ಕೆ ತೀವ್ರ ನೊಂದುಕೊಂಡಿರುವ ವೀಣಾ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಮಾತುಕತೆ ನಡೆಸಿದ್ದಾರೆ. ಸಂಸತ್ ಚುನಾವಣೆಯ ಬಳಿಕ ಯಾವುದಾದರೂ ಸ್ಥಾನಮಾನ ನೀಡುವ ಬಗ್ಗೆ ಮುಖ್ಯಮಂತ್ರಿ ಭರವಸೆ ನೀಡಿಲ್ಲ ಎಂದ ವೀಣಾ ತನಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಳಿದ್ದರೂ ಸಂಸದೆಯಾಗಬೇಕೆಂಬ ಅದಮ್ಯ ಹಂಬಲದಿಂದ ಅದನ್ನು ನಿರಾಕರಿಸಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಕಾಯುತ್ತಿದ್ದೆ ಅಂತ ಹೇಳಿದರು.

ಆದರೆ ವರಿಷ್ಠರು ತನಗೆ ನಿರಾಶೆಗೊಳಿಸಿದರು ಮತ್ತು ತನ್ನ ಸಾಮರ್ಥ್ಯವನ್ನು ಕೇವಲ ಕ್ಷೇತ್ರದಲ್ಲಿ ಸಂಘಟನೆ ಕೆಲಸ ಮಾಡುವುದಕ್ಕೆ ಸೀಮಿತಗೊಳಿಸಿದರು ಎಂದು ವೀಣಾ ಹೇಳಿದರು. ಬಾಗಲಕೋಟೆ ಕ್ಷೇತ್ರದಲ್ಲಿ ತಾನು ಸ್ಥಳೀಯಳು ಮತ್ತು ಜನ ತನ್ನನ್ನು ಗುರುತಿಸುತ್ತಾರೆ ಆದರೆ ಸಂಯುಕ್ತ ಪಾಟೀಲ್ ಅವರ ಪತಿ ಬೀದರ್ ನವರು, ಅವರಿಗೆ ಬೀದರ್ ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡಬಹುದಿತ್ತಲ್ಲ? ಅವರನ್ನು ಬಾಗಲಕೋಟೆಗೆ ಕರೆತರುವ ಅವಶ್ಯಕತೆ ಏನಿತ್ತು ಎಂದು ವೀಣಾ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪತಿಯನ್ನು ಎಳೆತರದೆ ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಶಕ್ತಿ ನನಗಿದೆ: ವೀಣಾ ಕಾಶಪ್ಪನವರ್, ಕಾಂಗ್ರೆಸ್ ನಾಯಕಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More