ಆಜಾದ್ ಕಾಶ್ಮೀರ್: ವಿಶ್ವಕಪ್‌ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪಾಕ್ ಮಾಜಿ ನಾಯಕಿ; ವಿಡಿಯೋ
Women's World Cup 2025: 2025ರ ಮಹಿಳಾ ಏಕದಿನ ವಿಶ್ವಕಪ್ ಆರಂಭದಲ್ಲೇ ಸನಾ ಮಿರ್ 'ಆಜಾದ್ ಕಾಶ್ಮೀರ್' ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ. ಪಾಕಿಸ್ತಾನ-ಬಾಂಗ್ಲಾದೇಶ ಪಂದ್ಯದ ವೇಳೆ ಕಾಮೆಂಟರಿಯಲ್ಲಿ ಸನಾ ಮಿರ್ ಈ ಹೇಳಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದರೂ, ಇಂತಹ ಹೇಳಿಕೆಯಿಂದ ಭಾರತೀಯ ಅಭಿಮಾನಿಗಳು ಕೆರಳಿದ್ದಾರೆ. ಈ ವಿವಾದ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
2025 ರ ಮಹಿಳಾ ಏಕದಿನ ವಿಶ್ವಕಪ್ ಆರಂಭದಲ್ಲಿಯೇ ಹೊಸ ವಿವಾದವೊಂದು ಹುಟ್ಟಿಕೊಂಡಿದೆ. ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಸನಾ ಮಿರ್ ತಮ್ಮ ಕಾಮೆಂಟರಿಯಲ್ಲಿ ‘ಆಜಾದ್ ಕಾಶ್ಮೀರ್’ ಎಂದು ಹೇಳುವ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಗುರುವಾರ ನಡೆದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯದ ಸಂದರ್ಭದಲ್ಲಿ ಕಾಮೆಂಟರಿ ಮಾಡುತ್ತಿದ್ದ ಸನಾ ಮಿರ್, ತಂಡದ ಯುವ ಆಟಗಾರ್ತಿಯ ಬಗ್ಗೆ ವಿವರಣೆ ನೀಡುವಾಗ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಇದೀಗ ಭಾರತದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ.
ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವೆ ನಡೆದ ಈ ಪಂದ್ಯದ ಸಮಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡದ ಯುವ ಆಟಗಾರ್ತಿ ನಟಾಲಿಯಾ ಪರ್ವೇಜ್ ಅವರ ಹಿನ್ನೆಲೆಯ ಬಗ್ಗೆ ಹೇಳುತ್ತಿದ್ದ ಸನಾ ಮಿರ್, ‘ಪರ್ವೇಜ್ ಆಜಾದ್ ಕಾಶ್ಮೀರ್ನಿಂದ ಬಂದವರು ಎಂದು ಹೇಳಿದರು. ಇದೀಗ ಅವರ ಹೇಳಿಕೆ ಭಾರತೀಯ ಅಭಿಮಾನಿಗಳನ್ನು ಕೆರಳಿಸಿದ್ದು ಸನಾ ಮಿರ್ ಅವರನ್ನು ತೀವ್ರವಾಗಿ ಟ್ರೋಲ್ ಮಾಡಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಆದಾಗ್ಯೂ ಪಾಕಿಸ್ತಾನ ದಶಕಗಳಿಂದಲೂ ಇದೇ ರೀತಿಯ ಹೇಳಿಕೆಗಳನ್ನು ನೀಡುತ್ತಾ ಬರುತ್ತಿದೆ. ಕಾಶ್ಮೀರ ಎಂದಿಗೂ ಪಾಕಿಸ್ತಾನದ ಪಾಲಾಗಲು ಬಿಡುವುದಿಲ್ಲ ಎಂದು ಭಾರತೀಯರು ಆಕ್ರೋಶ ಹೊರಹಾಕಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

