ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ

Updated on: Dec 29, 2025 | 8:42 AM

ಬಿಗ್ ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳಾದ ನಮ್ರತಾ ಗೌಡ ಹಾಗೂ ಸಂಗೀತಾ ಶೃಂಗೇರಿ ಒಟ್ಟಾಗಿ ಕಾಣಿಸಿಕೊಂಡ ದಾಖಲೆಯೇ ಇಲ್ಲ ಎಂದರೂ ತಪ್ಪಾಗಲಾರದು. ಇವರು ಬಿಗ್ ಬಾಸ್ ಮುಗಿದ ಬಳಿಕ ದೂರವೇ ಇದ್ದರು. ಕೊನೆಗೂ ಇವರು ಒಂದಾಗಿದ್ದಾರೆ. ಇವರನ್ನು ನೋಡಿ ಎಲ್ಲರಿಗೂ ಖುಷಿ ಆಗಿದೆ.

ಬಿಗ್ ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳಾದ ನಮ್ರತಾ ಗೌಡ ಹಾಗೂ ಸಂಗೀತಾ ಶೃಂಗೇರಿ ಮಧ್ಯೆ ಸಾಕಷ್ಟು ಕಿರಿಕ್​​ಗಳು ಆದವು. ನಮ್ರತಾ ಉತ್ತರ ಆದರೆ, ಸಂಗೀತಾ ದಕ್ಷಿಣ ಎಂಬ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದರು. ಈಗ ಇಬ್ಬರೂ ಒಂದೇ ಕಾರ್ಯಕ್ರಮದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಇವರ ಜೊತೆ ಕಾರ್ತಿಕ್ ಕೂಡ ಇದ್ದರು. ಆ ವಿಡಿಯೋ ಕೂಡ ವೈರಲ್ ಆಗಿ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More