‘ಚಂದ್ರಯಾನ 3 ಲ್ಯಾಂಡಿಂಗ್​ ಯಶಸ್ವಿಯಾಗಲಿ’: ಇಸ್ರೋಗೆ ಶುಭ ಕೋರಿದ ನಟ ರಮೇಶ್​ ಅರವಿಂದ್​

Updated on: Aug 23, 2023 | 1:21 PM

‘ಚಂದ್ರಯಾನ 3’ ಪ್ರಾಜೆಕ್ಟ್​ ಯಶಸ್ವಿ ಆಗಲಿ ಎಂದು ಎಲ್ಲರೂ ಶುಭ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದಕ್ಕೆ ಶುಭ ಹಾರೈಸಿದಿದ್ದಾರೆ. ನಟ ರಮೇಶ್​ ಅರವಿಂದ್​ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಮೂಲಕ ಅವರು ಇಸ್ರೋ ವಿಜ್ಞಾನಿಗಳಿಗೆ ವಿಶ್​ ಮಾಡಿದ್ದಾರೆ.

ಭಾರತದ ‘ಚಂದ್ರಯಾನ 3’ (Chandrayaan 3) ಬಗ್ಗೆ ಇಡೀ ಪ್ರಪಂಚವೇ ಮಾತನಾಡುತ್ತಿದೆ. ಚಂದ್ರನ ಅಂಗಳಕ್ಕೆ ಭಾರತ ಕಳಿಸಿರುವ ಉಪಗ್ರಹವು ಇಂದು (ಆಗಸ್ಟ್​ 23) ಲ್ಯಾಂಡ್​ (Chandrayaan 3 Landing) ಆಗಲಿದೆ. ಈ ಯೋಜನೆ ಯಶಸ್ವಿ ಆಗಲಿ ಎಂದು ಎಲ್ಲರೂ ಶುಭ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದಕ್ಕೆ ಶುಭ ಹಾರೈಸಿದಿದ್ದಾರೆ. ನಟ ರಮೇಶ್​ ಅರವಿಂದ್​ (Ramesh Aravind) ಕೂಡ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಮೂಲಕ ಅವರು ಇಸ್ರೋ ವಿಜ್ಞಾನಿಗಳಿಗೆ ವಿಶ್​ ಮಾಡಿದ್ದಾರೆ. ‘ಸಂಜೆ ಚಂದ್ರ ಮಂಡಲದ ಮೇಲೆ ಚಂದ್ರಯಾನ 3 ಲ್ಯಾಂಡ್​ ಆಗಲಿದೆ. ಆ ಲ್ಯಾಂಡಿಂಗ್​ ಯಶಸ್ವಿಯಾಗಲಿ. ಆಲ್​ ದಿ ಬೆಸ್ಟ್​ ಇಸ್ರೋ’ ಎಂದು ರಮೇಶ್​ ಅರವಿಂದ್​ ಅವರು ಶುಭ ಹಾರೈಸಿದ್ದಾರೆ. ಅದೇ ರೀತಿ ನಟಿ ತಾರಾ ಕೂಡ ತಮ್ಮ ವಿಶ್​ ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More