ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ಚೇತರಿಕೆ
ಸತ್ಯಜಿತ್ ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಗ್ಯಾಂಗ್ರಿನ್ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಈಗ ಸಕ್ಕರೆ ಕಾಯಿಲೆ ಮತ್ತು ಇನ್ನಿತರೆ ವಯೋಸಹಜ ಅನಾರೋಗ್ಯದ ಕಾರಣ ಸತ್ಯಜಿತ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಸತ್ಯಜಿತ್ ಪರಿಸ್ಥಿತಿ ಗಂಭೀರವಾಗಿತ್ತು. ಆದರೆ, ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
ಸತ್ಯಜಿತ್ ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಗ್ಯಾಂಗ್ರಿನ್ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಈಗ ಸಕ್ಕರೆ ಕಾಯಿಲೆ ಮತ್ತು ಇನ್ನಿತರೆ ವಯೋಸಹಜ ಅನಾರೋಗ್ಯದ ಕಾರಣ ಸತ್ಯಜಿತ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿದೆ. ಹಲವು ದಿನಗಳಿಂದ ಸತ್ಯಜಿತ್ಗೆ ಆರೋಗ್ಯ ಕೈಕೊಟ್ಟಿದ್ದರಿಂದ ಅವರಿಗೆ ಆರ್ಥಿಕ ಸಂಕಷ್ಟ ಕೂಡ ಎದುರಾಗಿದೆ. ಒಂದು ಕಾಲದಲ್ಲಿ ಅವರು ಬಹು ಬೇಡಿಕೆಯ ಫೋಷಕ ನಟನಾಗಿದ್ದರು. ನೂರಾರು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.
ಇದನ್ನೂ ಓದಿ: ಐಸಿಯುನಲ್ಲಿ ಹಿರಿಯ ನಟ ಸತ್ಯಜಿತ್: ಆರೋಗ್ಯ ಸ್ಥಿತಿ ಗಂಭೀರ