Shivanna meets DKS: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿಗೆ ಪತ್ನಿಯೊಂದಿಗೆ ಆಗಮಿಸಿದ ನಟ ಶಿವರಾಜ್ ಕುಮಾರ್

|

Updated on: Jun 21, 2023 | 1:03 PM

ಸಾರ್ವತ್ರಿಕ ಚುನಾವಣೆ ಬಹಳ ದೂರವೇನೂ ಇಲ್ಲ, ಕೇವಲ 10 ತಿಂಗಳು ದೂರದಲ್ಲಿದೆ. ಕಾಂಗ್ರೆಸ್ ಪಕ್ಷ ಈಗಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದರೆ ಆಶ್ಚರ್ಯವೇನೂ ಇಲ್ಲ.

ಬೆಂಗಳೂರು: ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ (Shivarajkumar) ಇಂದು ತಮ್ಮ ಪತ್ನಿ ಗೀತಾ (Geeta) ಹಾಗೂ ಬಾಮೈದ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರಾಗಿರುವ ಮಧು ಬಂಗಾರಪ್ಪ (Madhu Bangarappa) ಅವರೊಂದಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಸದಾಶಿವನಗರದಲ್ಲಿರುವ ಮನೆಯಲ್ಲಿ ಭೇಟಿಯಾದರು. ಭೇಟಿಯ ಉದ್ದೇಶ ಗೊತ್ತಾಗಿಲ್ಲ. ರಾಜಕೀಯ ವಲಯಗಳಲ್ಲಿ ಹಬ್ಬಿರುವ ವದಂತಿಗಳನ್ನು ನಂಬುವುದಾದರೆ, ಗೀತಾರನ್ನು ಮುಂದಿನ ವರ್ಷ ನಡೆಯಲಿರುವ ಲೋಕ ಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಅಭ್ಯರ್ಥಿಯಾಗಿಸುವ ಪ್ರಸ್ತಾಪವಿದೆ ಮತ್ತು ಗೀತಾ ಸಹ ಆ ಬಗ್ಗೆ ಆಸಕ್ತಿ ತೋರಿದ್ದಾರೆ. ಸಾರ್ವತ್ರಿಕ ಚುನಾವಣೆ ಬಹಳ ದೂರವೇನೂ ಇಲ್ಲ, ಕೇವಲ 10 ತಿಂಗಳು ದೂರದಲ್ಲಿದೆ. ಕಾಂಗ್ರೆಸ್ ಪಕ್ಷ ಈಗಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದರೆ ಆಶ್ಚರ್ಯವೇನೂ ಇಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ