ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಏನು?

Edited By:

Updated on: Oct 01, 2021 | 2:11 PM

ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಸಾವಿನ ಪ್ರಕರಣದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸ್​ ತನಿಖೆಯ ವರದಿ ಬಗ್ಗೆ ಎಲ್ಲರಲ್ಲೂ ಕೌತುಕ ಮೂಡಿದೆ.

ಚೌಕಟ್ಟು, ಫನ್​ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಸವಿ ಮಾದಪ್ಪ ಅವರು ಗುರುವಾರ (ಸೆ.30) ಸಾವನ್ನಪಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಬೆಂಗಳೂರಿನ ಅಪಾರ್ಟ್​​ಮೆಂಟ್​ನಲ್ಲಿ ಬಾಯ್​ಫ್ರೆಂಡ್​ ಜೊತೆ ಅವರು ವಾಸವಾಗಿದ್ದರು ಎಂಬ ಮಾಹಿತಿ ಇದೆ. ಆದರೆ ತಮ್ಮ ಮಗಳು ಒಬ್ಬಳೇ ಇದ್ದಳು ಎಂದು ಸವಿ ಪೋಷಕರು ಹೇಳುತ್ತಿದ್ದಾರೆ. ಈ ಸಾವು ಅನುಮಾನಾಸ್ಪದವಾಗಿದೆ ಎಂದು ಕೂಡ ತಂದೆ-ತಾಯಿ ಹೇಳಿಕೆ ನೀಡಿದ್ದಾರೆ. ಒಟ್ಟಾರೆ ಘಟನೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದಾರೆ.

‘ತನಿಖೆ ಆಗುತ್ತದೆ. ಆತ್ಮಹತ್ಯೆ, ಮಹಿಳೆ ಮೇಲಿನ ದೌರ್ಜನ್ಯ ಏನೇ ಇದ್ದರೂ ನಮ್ಮ ಸರ್ಕಾರ ಆದ್ಯತೆ ಮೇರೆಗೆ ತನಿಖೆ ನಡೆಸುತ್ತದೆ. ಯಾವ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ಈ ಬಗ್ಗೆ ತಿಳಿದುಕೊಳ್ಳುವಂತೆ ನಾನು ಅಧಿಕಾರಿಗಳಿಗೆ ಹೇಳಿದ್ದೇನೆ’ ಎಂದಿದ್ದಾರೆ ಆರಗ ಜ್ಞಾನೇಂದ್ರ.

ಇದನ್ನೂ ಓದಿ:

ನಟಿ ಸವಿ ಮಾದಪ್ಪ ಆತ್ಮಹತ್ಯೆ: ಮಗಳನ್ನು ನೆನೆದು ಆಸ್ಪತ್ರೆ ಎದುರು ಕಣ್ಣೀರಿಟ್ಟ ತಾಯಿ

ಆತ್ಮಹತ್ಯೆ ಮಾಡಿಕೊಂಡ ನಟಿ ಸವಿ ಮಾದಪ್ಪ ಡೆತ್​ ನೋಟ್​ ಪತ್ತೆ; ಎಲ್ಲರಲ್ಲೂ ಕ್ಷಮೆ ಕೇಳಿದ್ದೇಕೆ?