Assembly Polls: ಸಂದೇಶ್ ನಾಗರಾಜ್, ಕಿರಣ್ ಕುಮಾರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ, ಪಕ್ಷಕ್ಕೆ ಸ್ವಾಗತಿಸಿದ ಸಿದ್ದರಾಮಯ್ಯ, ಪರಮೇಶ್ವರ್
ನಗರದಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಚೇರಿಯಲ್ಲಿ ಸಿದ್ದರಾಮಯ್ಯ ಮತ್ತು ಡಾ ಜಿ ಪರಮೇಶ್ವರ್ ಸಮ್ಮುಖದಲ್ಲಿ ಬಿಜೆಪಿ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು.
ಬೆಂಗಳೂರು: ವಿಧಾನ ಸಭಾ ಚುನಾವಣೆ ಹತ್ತಿರಗೊಳ್ಳುತ್ತಿದ್ದಂತೆಯೇ ಪಕ್ಷಾಂತರ ಪರ್ವದ ಭರಾಟೆ ಶುರುವಿಟ್ಟುಕೊಂಡಿದೆ. ಸೋಮವಾರ ಬಿಜೆಪಿ ಪಕ್ಷದ ಧುರೀಣರಾದ ಸಂದೇಶ್ ನಾಗರಾಜ್ (Sandesh Nagaraj), ಕಿರಣ್ ಕುಮಾರ್ (Kiran Kumar) ಹಾಗೂ ಇನ್ನೂ ಕೆಲನಾಯಕರು ಕಾಂಗ್ರೆಸ್ ಪಕ್ಷ ಸೇರಿದರು. ನಗರದಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಚೇರಿಯಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಡಾ ಜಿ ಪರಮೇಶ್ವರ್ (Dr G Parameshwar) ಸಮ್ಮುಖದಲ್ಲಿ ಬಿಜೆಪಿ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲ, ಕೆ ಹೆಚ್ ಮುನಿಯಪ್ಪ, ಜಮೀರ್ ಅಹ್ಮದ್, ಕೆ ಎನ್ ರಾಜಣ್ಣ ಹಾಗೂ ಇತರ ಕೆಲ ನಾಯಕರು ಸಹ ಉಪಸ್ಥಿತರಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 20, 2023 02:18 PM
Latest Videos