ನಾಲ್ಕು ಬಾರಿ ತುಕಾರಾಂ ಆಯ್ಕೆಯಾಗಿರುವ ಸಂಡೂರು ಕಾಂಗ್ರೆಸ್ ಪಕ್ಷದ ಭದ್ರಕೋಟೆ: ಬಿ ನಾಗೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Oct 24, 2024 | 5:16 PM

ಗಾಲಿ ಜನಾರ್ಧನ ರೆಡ್ಡಿ ಮತ್ತು ಬಿವೈ ವಿಜಯೇಂದ್ರ ಅವರು ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಲಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ನಾಗೇಂದ್ರ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅಧಿಕಾರ ಎಲ್ಲರಿಗೂ ಇದೆ ಎಂದು ಹೇಳಿದರು. ನಡುವೆ ಬಾಯಿ ಹಾಕಿದ ಸಚಿವ ಜಮೀರ್ ಅಹ್ಮದ್ ಖಾನ್, ಯಾರೇ ಬಂದ್ರೂ ಗೆಲ್ಲೋದು ಮಾತ್ರ ಕಾಂಗ್ರೆಸ್ ಎಂದರು.

ಬಳ್ಳಾರಿ: ಸಂಡೂರು ಯಾವತ್ತಿಗೂ ಕಾಂಗ್ರೆಸ್ ಭದ್ರಕೋಟೆ, ತುಕಾರಾಂ ಅವರು ಹಿಂದೆ ನಾಲ್ಕು ಬಾರಿ ಆಯ್ಕೆಯಾಗಿರೋದು ಇದಕ್ಕೆ ಸಾಕ್ಷಿ, ಈ ಬಾರಿಯ ಚುನಾವಣೆಯಲ್ಲೂ ಅವರ ಪತ್ನಿ ಅನ್ನಪುರ್ಣಮ್ಮನವರು ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಆಡಳಿತ ಮತ್ತು ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪೂರಕವಾಗಲಿವೆ ಎಂದು ಮಾಜಿ ಸಚಿವ ಬಿ ನಾಗೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಶಿಗ್ಗಾಂವಿ, ಸಂಡೂರು ಬೈ ಎಲೆಕ್ಷನ್: ಭರತ್ ಬೊಮ್ಮಾಯಿ, ಬಂಗಾರು ಹನುಮಂತುಗೆ ಬಿಜೆಪಿ ಟಿಕೆಟ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.