‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ ಶೃಂಗೇರಿ

Updated on: Dec 10, 2023 | 9:30 AM

‘ಸೂಪರ್​ ಸಂಡೇ ವಿತ್​ ಸುದೀಪ’ ಸಂಚಿಕೆಯಲ್ಲಿ ಸಂಗೀತಾ ಶೃಂಗೇರಿ ಅವರು ನೇರವಾಗಿ ಕೆಲವು ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ‘ಅವರು ಗಲೀಜಿನಲ್ಲಿ ಇದ್ದಾರೆ. ಅವರಿಗೆ ಲೋಕವೆಲ್ಲ ಗಲೀಜಾಗಿಯೇ ಕಾಣಿಸುತ್ತಿದೆ’ ಎಂದು ಸಂಗೀತಾ ಹೇಳಿದ್ದಾರೆ. ಬಿಗ್​ ಬಾಸ್​ ಮನೆಯೊಳಗೆ ಆರೋಪ-ಪ್ರತ್ಯಾರೋಪ ಜೋರಾಗಿದೆ.

ನಟಿ ಸಂಗೀತಾ ಶೃಂಗೇರಿ (Sangeetha Sringeri) ಅವರದ್ದು ನೇರ ನಡೆ-ನುಡಿಯ ವ್ಯಕ್ತಿತ್ವ. ಯಾರಿಗೂ ಜಗ್ಗದ ರೀತಿಯಲ್ಲಿ ಅವರು ಬಿಗ್​ ಬಾಸ್​ (Bigg Boss Kannada) ಮನೆಯಲ್ಲಿ ಆಟ ಆಡುತ್ತಿದ್ದಾರೆ. ಇತ್ತೀಚೆಗಿನ ಟಾಸ್ಕ್​ನಲ್ಲಿ ಅವರ ಕಣ್ಣಿಗೆ ತೊಂದರೆ ಉಂಟಾಯಿತು. ಅದಕ್ಕಾಗಿ ಅವರು ಚಿಕಿತ್ಸೆ ಪಡೆದು ವಾಪಸ್​ ಬಿಗ್​ ಬಾಸ್​ ಮನೆಯೊಳಗೆ ಬಂದಿದ್ದಾರೆ. ಆ ಬಳಿಕ ಅವರಲ್ಲಿ ಛಲ ಹೆಚ್ಚಾಗಿದೆ. ‘ಸೂಪರ್​ ಸಂಡೇ ವಿತ್​ ಸುದೀಪ’ ಸಂಚಿಕೆಯಲ್ಲಿ ಸಂಗೀತಾ ಅವರು ನೇರವಾಗಿ ಕೆಲವು ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ‘ಅವರು ಗಲೀಜಿನಲ್ಲಿ ಇದ್ದಾರೆ. ಅವರಿಗೆ ಲೋಕವೆಲ್ಲ ಗಲೀಜಾಗಿಯೇ ಕಾಣಿಸುತ್ತಿದೆ’ ಎಂದು ಸಂಗೀತಾ ಹೇಳಿದ್ದಾರೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಡಿಸೆಂಬರ್​ 10ರ ರಾತ್ರಿ 9 ಗಂಟೆಗೆ ಈ ಎಪಿಸೋಡ್​ ಪ್ರಸಾರ ಆಗಲಿದೆ. 24 ಗಂಟೆಯೂ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಲೈವ್​ ವೀಕ್ಷಿಸಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More