ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ

Updated on: Jul 11, 2025 | 11:05 PM

ಸಂಜು ಬಸಯ್ಯ ಅವರ ಪತ್ನಿ ಪಲ್ಲವಿಗೆ ಅಶ್ಲೀಲ ಸಂದೇಶ ಕಳಿಸುವವರಿಗೆ ಕಾನೂನಿನ ಮೂಲಕ ಪಾಠ ಕಲಿಸಲಾಗಿದೆ. ಕೆಟ್ಟ ಕಮೆಂಟ್ ಹಾಗೂ ಮೆಸೇಜ್ ಮಾಡುವವರ ವಿರುದ್ಧ ಪೊಲೀಸರಿಗೆ ಸಂಜು ಬಸಯ್ಯ ದೂರು ನೀಡಿದ್ದಾರೆ. ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಆ ಬಗ್ಗೆ ಸಂಜು ಬಸಯ್ಯ ಅವರು ವಿವರಿಸಿದ್ದಾರೆ.

ನಟ ಸಂಜು ಬಸಯ್ಯ ಅವರ ಪತ್ನಿ (Sanju Basayya Wife) ಪಲ್ಲವಿಗೆ ಸೋಶಿಯಲ್ ಮೀಡಿಯಾ ಮೂಲಕ ಅಶ್ಲೀಲ ಸಂದೇಶ ಕಳಿಸುವವರಿಗೆ ಕಾನೂನಿನ ಮೂಲಕ ಪಾಠ ಕಲಿಸಲಾಗಿದೆ. ಕೆಟ್ಟ ಕಮೆಂಟ್ ಮತ್ತು ಮೆಸೇಜ್ ಮಾಡುವವರ ವಿರುದ್ಧ ಪೊಲೀಸರಿಗೆ ಸಂಜು ಬಸಯ್ಯ ದೂರು ನೀಡಿದರು. ಕಿಡಿಗೇಡಿಯನ್ನು ಪತ್ತೆ ಹಚ್ಚಿ, ಪೊಲೀಸ್ ಠಾಣೆಗೆ ಕರೆಸಲಾಗಿದೆ. ಈ ಬಗ್ಗೆ ನಟ ಸಂಜು ಬಸಯ್ಯ (Sanju Basayya) ಅವರು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಒಟ್ಟಾರೆ ಘಟನೆಯ ಬಗ್ಗೆ ಅವರು ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More