ಆಯತಪ್ಪಿ ಬಿದ್ದಿದ್ದ ಬೈಕ್ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ಲೋಕಾಪುರದ ಬಳಿ ಬೈಕ್ ಅಪಘಾತಕ್ಕೀಡಾದ ಬೈಕ್ ಸವಾರನಿಗೆ ಸಚಿವ ಸಂತೋಷ್ ಲಾಡ್ ಸಹಾಯ ಮಾಡಿದ್ದಾರೆ. ಅವರು ತಮ್ಮ ವಾಹನದಲ್ಲಿ ಗಾಯಾಳುವನ್ನು ಲೋಕಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಿದರು.
ಬಾಗಲಕೋಟೆ, ಫೆಬ್ರವರಿ 07: ಅಪಘಾತದಲ್ಲಿ ಗಾಯಗೊಂಡ ಗಾಯಾಳುಗೆ ಸಚಿವ ಸಂತೋಷ್ ಲಾಡ್ (Santosh Lad) ನೆರವಾಗಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ಬಳಿ ಬೈಕ್ ಸವಾರ ಆಯತಪ್ಪಿ ಬಿದ್ದಿದ್ದರು. ರಸ್ತೆಯಲ್ಲೇ ಸವಾರ ಸತೀಶ್ ನರಳಾಡುತ್ತಿದ್ದ. ಅದೇ ಮಾರ್ಗದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಬರುತ್ತಿದ್ದರು. ತಮ್ಮ ಕಾರಿನಲ್ಲೇ ಲೋಕಾಪುರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ. ಆ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.