“ಮೋದಿಗೆ ಬೈಯಲು ಹೈಕಮಾಂಡ್ ಆರ್ಡರ್ ಆಗಿದೆ”: ಸಂತೋಷ್ ಲಾಡ್ ಹೇಳಿದ್ದಾಗಿ ಪ್ರಲ್ಹಾದ್ ಜೋಶಿ ಹೇಳಿಕೆ

Edited By:

Updated on: Mar 19, 2024 | 3:21 PM

ಪ್ರಧಾನಿ ನರೇಂದ್ರ ಮೋದಿ ಹಾಗೂ ತಮ್ಮ ವಿರುದ್ಧ ನಿತಂತರವಾಗಿ ಟೀಕಿಸುತ್ತಿರುವ ಸಚಿವ ಸಂತೋಷ್ ಲಾಡ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ಕೊಟ್ಟಿರುವ ವಿಡಿಯೋ ವೈರಲ್ ಆಗುತ್ತಿದೆ. ಮೋದಿ ಅವರಿಗೆ ಯಾಕೆ ಬೈಯುತ್ತಿದ್ದೀಯಾ ಎಂದು ಕೇಳಿದಾಗ, ಸಚಿವ ಸ್ಥಾನ ಉಳಿಸಿಕೊಳ್ಳಲು ಬೈಯುತ್ತಿದ್ದೇವೆ ಎಂದು ಸಂತೋಷ್ ಲಾಡ್ ಹೇಳಿದ್ದಾಗಿ ಜೋಶಿ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು.

ಹುಬ್ಬಳ್ಳಿ, ಮಾ.19: ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ತಮ್ಮ ವಿರುದ್ಧ ನಿತಂತರವಾಗಿ ಟೀಕಿಸುತ್ತಿರುವ ಸಚಿವ ಸಂತೋಷ್ ಲಾಡ್ (Santosh Lad) ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಟಾಂಗ್ ಕೊಟ್ಟಿರುವ ವಿಡಿಯೋ ವೈರಲ್ (Viral Video) ಆಗುತ್ತಿದೆ. ಮೋದಿ ಅವರಿಗೆ ಯಾಕೆ ಬೈಯುತ್ತಿದ್ದೀಯಾ ಎಂದು ಕೇಳಿದಾಗ, ಸಚಿವ ಸ್ಥಾನ ಉಳಿಸಿಕೊಳ್ಳಲು ಬೈಯುತ್ತಿದ್ದೇವೆ ಎಂದು ಸಂತೋಷ್ ಲಾಡ್ ಹೇಳಿದ್ದಾಗಿ ಜೋಶಿ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು.

ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರಲ್ಹಾದ್ ಜೋಶಿ, ವಿಮಾನದಲ್ಲಿ ನಾನು ಮತ್ತು ಸಂತೋಷ್ ಲಾಡ್ ಒಟ್ಟಿಗೆ ಬರುತ್ತಿದ್ದಾಗ, ಯಾಕಪ್ಪಾ ನನ್ನ ಮತ್ತು ಮೋದಿ ವಿರುದ್ಧ ಟೀಕೆ ಮಡುತ್ತಿದ್ದಿಯಾಲ್ಲ, ನನ್ನನ್ನು ಬೈದರೆ ಸರಿ, ಮೋದಿಗೆ ಯಾಕೆ ಟೀಕೆ ಮಾಡುತ್ತಿದ್ದಿಯಾ ಎಂದು ಸಂತೋಷ್ ಲಾಡ್ ಅವರನ್ನು ಕೇಳಿದೆ. ಅದಕ್ಕೆ ಸಂತೋಷ್ ಲಾಡ್ ಹಿಂದಿಯಲ್ಲಿ, ಬೈಯದೆ ಇದ್ದರೆ ನನ್ನ ನೌಕರಿ ಹೋಗುತ್ತೆ. ಈ ಬಗ್ಗೆ ಹೈಕಮಾಂಡ್ ಆರ್ಡರ್ ಆಗಿದೆ. ಆವಾಗಿನಿಂದ ನಾನು ತಲೆಕೆಡಿಸಿಕೊಂಡಿಲ್ಲ, ನೀವೂ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾಗಿ ಜೋಶಿ ಹೇಳುವುದನ್ನು ಕೇಳಬಹುದು.

ಇದನ್ನೂ ಓದಿ: ಕೆಎಸ್​ ಈಶ್ವರಪ್ಪ ಬಂಡಾಯ ಶಮನ ಆಗುತ್ತೆ: ಪ್ರಹ್ಲಾದ್​ ಜೋಶಿ

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More