ಮೊದಲ ಸಿನಿಮಾ ‘ಗೌರಿ’ ಬಗ್ಗೆ ‘ಪುಟ್ಟಗೌರಿ’ ಸಾನ್ಯಾ ಮಾತು

ಕನ್ನಡದ ಜನಪ್ರಿಯ ಧಾರಾವಾಹಿ ‘ಪುಟ್ಟಗೌರಿ ಮದುವೆ’ಯಲ್ಲಿ ಪುಟ್ಟಗೌರಿಯಾಗಿ ನಟಿಸಿದ್ದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್ ಈಗ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅದೂ ‘ಗೌರಿ’ ಹೆಸರಿನ ಸಿನಿಮಾದ ಮೂಲಕ. ಸಿನಿಮಾದ ಬಗ್ಗೆ ಸಾನ್ಯ ಅಭಿಪ್ರಾಯ ಹಂಚಿಕೊಂಡಿದ್ದು ಹೀಗೆ.

ಕನ್ನಡದ ಜನಪ್ರಿಯ ಧಾರಾವಾಹಿ ‘ಪುಟ್ಟಗೌರಿ ಮದುವೆ’ಯಲ್ಲಿ ಪುಟ್ಟಗೌರಿಯಾಗಿ ನಟಿಸಿದ್ದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್ (Sanya Iyer) ಈಗ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅದೂ ‘ಗೌರಿ’ ಹೆಸರಿನ ಸಿನಿಮಾದ ಮೂಲಕ. ಸಾನ್ಯಾಗೆ ಇದು ನಾಯಕಿಯಾಗಿ ಮೊದಲ ಸಿನಿಮಾ ಅಂತೆಯೆ ಸಿನಿಮಾದ ನಾಯಕ ಸಮರ್ಜಿತ್​ಗೂ ಇದು ನಾಯಕನಾಗಿ ಮೊದಲ ಸಿನಿಮಾ. ನಿರ್ದೇಶಕ ಇಂದ್ರಜಿತ್ ಲಂಕೇಶ್ ತಮ್ಮ ಪುತ್ರ ಸಮರ್ಜಿತ್ ರ ಮೊದಲ ಸಿನಿಮಾದ ನಿರ್ದೇಶನ ಹಾಗೂ ನಿರ್ಮಾಣದ ಜವಾಬ್ದಾರಿಯನ್ನು ತಾವೇ ಹೊತ್ತಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಮೊದಲ ಹಾಡನ್ನು ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಲಾಂಚ್​ ಮಾಡಲಾಯ್ತು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಸಾನ್ಯಾ ಐಯ್ಯರ್ ಅವರು ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us