ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ಗೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಇಷ್ಟ ಆಯ್ತಾ? ವಿಡಿಯೋ ನೋಡಿ..
ಸ್ಯಾಂಡಲ್ವುಡ್ನ ನಟ-ನಟಿಯರು ಮತ್ತು ತಂತ್ರಜ್ಞರಿಗಾಗಿ ಆಗಸ್ಟ್ 31ರ ಸಂಜೆ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಎಲ್ಲರೂ ಈ ಸಿನಿಮಾ ನೋಡಿ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ದಂಪತಿ ಕೂಡ ಈ ಚಿತ್ರದ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ.
ಹೇಮಂತ್ ಎಂ. ರಾವ್ ಅವರು ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradaache Ello Side A) ಸಿನಿಮಾ ಇಂದು (ಸೆಪ್ಟೆಂಬರ್ 1) ಬಿಡುಗಡೆ ಆಗಿದೆ. ಗುರುವಾರ (ಆಗಸ್ಟ್ 31) ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ಈ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಅನೇಕರು ಬಂದು ಸಿನಿಮಾ ನೋಡಿ ಎಂಜಾಯ್ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ (Rakshit Shetty) ಮತ್ತು ರುಕ್ಮಿಣಿ ವಸಂತ್ ಜೋಡಿಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ದಂಪತಿ ಕೂಡ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ‘ರಕ್ಷಿತ್ ಮತ್ತು ರುಕ್ಮಿಣಿ ಅವರ ಕೆಮಿಸ್ಟ್ರಿ ತುಂಬ ಚೆನ್ನಾಗಿದೆ. ನಿರ್ದೇಶಕ ಹೇಮಂತ್ ಅವರು ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಬಗ್ಗೆ ಹೆಮ್ಮೆ ಆಗುತ್ತದೆ’ ಎಂದು ಡಾರ್ಲಿಂಗ್ ಕೃಷ್ಣ (Darling Krishna) ಹೇಳಿದ್ದಾರೆ. ‘ಹೇಮಂತ್ ರಾವ್ ಅವರಿಗೆ ಈ ಸಿನಿಮಾದ ಕ್ರಿಡಿಟ್ ಸಲ್ಲಬೇಕು. ನನಗೆ ಈ ಚಿತ್ರ ತುಂಬ ಇಷ್ಟ ಆಯ್ತು’ ಎಂದು ಮಿಲನಾ ನಾಗರಾಜ್ ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

