ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​ಗೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಇಷ್ಟ ಆಯ್ತಾ? ವಿಡಿಯೋ ನೋಡಿ..

Updated on: Sep 01, 2023 | 2:36 PM

ಸ್ಯಾಂಡಲ್​ವುಡ್​ನ ನಟ-ನಟಿಯರು ಮತ್ತು ತಂತ್ರಜ್ಞರಿಗಾಗಿ ಆಗಸ್ಟ್​ 31ರ ಸಂಜೆ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಪ್ರೀಮಿಯರ್​ ಶೋ ಆಯೋಜಿಸಲಾಗಿತ್ತು. ಎಲ್ಲರೂ ಈ ಸಿನಿಮಾ ನೋಡಿ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ಡಾರ್ಲಿಂಗ್​ ಕೃಷ್ಣ ಮತ್ತು ಮಿಲನಾ ನಾಗರಾಜ್​ ದಂಪತಿ ಕೂಡ ಈ ಚಿತ್ರದ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ.

ಹೇಮಂತ್​ ಎಂ. ರಾವ್​ ಅವರು ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradaache Ello Side A) ಸಿನಿಮಾ ಇಂದು (ಸೆಪ್ಟೆಂಬರ್ 1) ಬಿಡುಗಡೆ ಆಗಿದೆ. ಗುರುವಾರ (ಆಗಸ್ಟ್​ 31) ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ಈ ಸಿನಿಮಾದ ಪ್ರೀಮಿಯರ್​ ಶೋ ಆಯೋಜಿಸಲಾಗಿತ್ತು. ಅನೇಕರು ಬಂದು ಸಿನಿಮಾ ನೋಡಿ ಎಂಜಾಯ್​ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ (Rakshit Shetty) ಮತ್ತು ರುಕ್ಮಿಣಿ ವಸಂತ್​ ಜೋಡಿಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಡಾರ್ಲಿಂಗ್​ ಕೃಷ್ಣ ಮತ್ತು ಮಿಲನಾ ನಾಗರಾಜ್​ ದಂಪತಿ ಕೂಡ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ‘ರಕ್ಷಿತ್​ ಮತ್ತು ರುಕ್ಮಿಣಿ ಅವರ ಕೆಮಿಸ್ಟ್ರಿ ತುಂಬ ಚೆನ್ನಾಗಿದೆ. ನಿರ್ದೇಶಕ ಹೇಮಂತ್​ ಅವರು ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಬಗ್ಗೆ ಹೆಮ್ಮೆ ಆಗುತ್ತದೆ’ ಎಂದು ಡಾರ್ಲಿಂಗ್​ ಕೃಷ್ಣ (Darling Krishna) ಹೇಳಿದ್ದಾರೆ. ‘ಹೇಮಂತ್​ ರಾವ್​ ಅವರಿಗೆ ಈ ಸಿನಿಮಾದ ಕ್ರಿಡಿಟ್​ ಸಲ್ಲಬೇಕು. ನನಗೆ ಈ ಚಿತ್ರ ತುಂಬ ಇಷ್ಟ ಆಯ್ತು’ ಎಂದು ಮಿಲನಾ ನಾಗರಾಜ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More