AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಪ್ತ ಸಾಗರದಾಚೆ ಎಲ್ಲೋ’ ನಿರ್ದೇಶಕ ಹೇಮಂತ್ ರಾವ್ ಅವರಲ್ಲಿ ರಕ್ಷಿತ್​ಗೆ ಇಷ್ಟವಾಗಿದ್ದೇನು?

‘ಸಪ್ತ ಸಾಗರದಾಚೆ ಎಲ್ಲೋ’ ನಿರ್ದೇಶಕ ಹೇಮಂತ್ ರಾವ್ ಅವರಲ್ಲಿ ರಕ್ಷಿತ್​ಗೆ ಇಷ್ಟವಾಗಿದ್ದೇನು?

ರಾಜೇಶ್ ದುಗ್ಗುಮನೆ
|

Updated on:Aug 28, 2023 | 12:07 PM

Share

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಟ್ರೇಲರ್ ಮೂಲಕ ಸದ್ದು ಮಾಡುತ್ತಿದೆ. ಈ ಚಿತ್ರ ಸೆಪ್ಟೆಂಬರ್ 1ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಹೇಮಂತ್ ರಾವ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ನಿರ್ದೇಶಕರ ಬಗ್ಗೆ ರಕ್ಷಿತ್ ಮಾತನಾಡಿದ್ದಾರೆ

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ (Sapta Sagaradache Yello) ಟ್ರೇಲರ್ ಮೂಲಕ ಸದ್ದು ಮಾಡುತ್ತಿದೆ. ಈ ಚಿತ್ರ ಸೆಪ್ಟೆಂಬರ್ 1ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಹೇಮಂತ್ ರಾವ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ನಿರ್ದೇಶಕರ ಬಗ್ಗೆ ರಕ್ಷಿತ್ (Rakshit Shetty) ಮಾತನಾಡಿದ್ದಾರೆ. ‘ನಾನು ಹೈಲೈಟ್ ಆಗಬೇಕು, ಹಣ ಮಾಡಬೇಕು ಎಂಬುದು ಕೆಲವು ನಿರ್ದೇಶಕರಿಗೆ ಇರುತ್ತದೆ. ಆದರೆ ಪ್ರಬುದ್ಧ ನಿರ್ದೇಶಕ ಸಿನಿಮಾ ಮೊದಲು ಆಮೇಲೆ ನಾನು ಎನ್ನುವ ಮನಸ್ಥಿತಿಯಲ್ಲಿ ಇರುತ್ತಾನೆ. ಹೇಮಂತ್ ರಾವ್ ಎರಡನೇ ಸಾಲಿಗೆ ಸೇರುತ್ತಾರೆ’ ಎಂದು ಹೇಮಂತ್ ಬಗ್ಗೆ ರಕ್ಷಿತ್ ಹೆಮ್ಮೆ ವ್ಯಕ್ತಪಡಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Aug 28, 2023 11:35 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More