‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಸಾರಾ ಗೋವಿಂದು
ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ಈ ಸಮಿತಿ ಸಾಕಷ್ಟು ವಿಚಾರಗಳನ್ನು ರಿವೀಲ್ ಮಾಡಿದೆ. ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಆಗುತ್ತಿರುವ ಕಿರುಕುಳದ ಬಗ್ಗೆ ವಿವರಣೆ ನೀಡಲಾಗಿದೆ. ಅದೇ ರೀತಿ ಕನ್ನಡದಲ್ಲೂ ಒಂದು ಸಮಿತಿ ಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.
ಕನ್ನಡ ಚಿತ್ರರಂಗದಲ್ಲಿ ಪಾಶ್ ಸಮಿತಿ ರಚನೆಗೆ ಮಹಿಳಾ ಆಯೋಗ ಮುಂದಕ್ಕೆ ಬಂದಿದೆ. ಈ ಸಂಬಂಧ ಫಿಲ್ಮ್ ಚೇಂಬರ್ನಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ. ‘ಸಮಿತಿ ಬೇಡ. ಸಮಿತಿ ಮಾಡಿದ್ರೆ ಚಿತ್ರರಂಗಕ್ಕೆ ನಷ್ಟ’ ಎಂದು ಸಾರಾ ಗೋವಿಂದು ಹೇಳಿದ್ದಾರೆ. ಈಗ ಸಮಿತಿ ಬೇಕು ಅಥವಾ ಬೇಡ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.‘