‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಡಿಕೆಶಿ ಹೇಳಿಕೆಗೆ ಸಾರಾ ಗೋವಿಂದು ಉತ್ತರ
ಕಲಾವಿದರ ನಟ್ಟು ಬೋಲ್ಟ್ ಟೈಟ್ ಮಾಡೋದು ನನಗೆ ಗೊತ್ತು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿದ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಇದನ್ನು ಟೀಕಿಸಿದರೆ, ಇನ್ನೂ ಕೆಲವರು ಅವರನ್ನು ಬೆಂಬಲಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಚಿತ್ರರಂಗದ ಕಲಾವಿದರ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿದ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ‘ಯಾರು ಯಾರಿಗೆ ಎಲ್ಲೆಲ್ಲಿ ನಟ್ಟು ಬೋಲ್ಟು ಟೈಟ್ ಮಾಡಬೇಕು ಎಂಬುದು ನನಗೂ ಗೊತ್ತಿದೆ’ ಎಂಬುದು ಡಿಕೆಶಿ ಹೇಳಿಕೆ ಆಗಿತ್ತು. ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ. ಪಕ್ಷಾತೀತವಾಗಿ ಹೋರಾಟಗಳು ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Mar 03, 2025 02:07 PM