IND vs AUS, World Cup Final: ಫೈನಲ್ ಪಂದ್ಯ ವೀಕ್ಷಿಸಲು ಅಹ್ಮದಾಬಾದ್ಗೆ ಬಂದ ಸಾರಾ ತೆಂಡೂಲ್ಕರ್: ವೈರಲ್ ಆಗ್ತಿದೆ ವಿಡಿಯೋ
Sara Tendulkar, India vs Australia Final: ಭಾರತ ಹಾಗೂ ಆಸ್ಟ್ರೇಲಿಯಾ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಣೆಗೆ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಬಂದಿದ್ದಾರೆ. ಇವರು ಅಹ್ಮದಾಬಾದ್ಗೆ ಆಗಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಇಂದು ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಈ ಅಂತಿಮ ರಣರೋಚಕ ಕದನಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿ ಉಳಿದಿವೆ. ಸ್ಟೇಡಿಯಂಗೆ ಈಗಾಗಲೇ ಸಾವಿರಾರು ಜನರು ಬಂದು ಕಾಯುತ್ತಿದ್ದಾರೆ. ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಈ ಪಂದ್ಯ ವೀಕ್ಷಣೆಗೆ ದಿಗ್ಗಜ ಆಟಗಾರರು, ಪ್ರಸಿದ್ಧ ನಟ-ನಟಿಯರು ಕೂಡ ಆಗಮಿಸುತ್ತಿದ್ದಾರೆ. ವಿರಾಟ್ ಕೊಹ್ಲಿ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಖಾಸಗಿ ಜೆಟ್‌ನಲ್ಲಿ ಅಹ್ಮದಾಬಾದ್ಗೆ ತಲುಪಿದ್ದಾರೆ. ಇದರ ಬೆನ್ನಲ್ಲೇ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಕೂಡ ಪಂದ್ಯ ವೀಕ್ಷಣೆಗೆ ಬಂದಿದ್ದಾರೆ. ಇವರು ಆಗಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಸಾರಾ ತೆಂಡೂಲ್ಕರ್ 2023 ರ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಹಲವಾರು ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಅಂತೆಯೆ ಭಾರತೀಯ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಅವರ ಪತ್ನಿ ಅಥಿಯಾ ಶೆಟ್ಟಿ ಕೂಡ ಬಂದಿದ್ದಾರೆ. (ವಿಡಿಯೋ ಕೃಪೆ: Scroll & Play Twitter)
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 19, 2023 10:22 AM
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

