Bigg Boss Kannada: ಜಗದೀಶ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಹವಾ ಶುರು

Updated on: Oct 20, 2024 | 6:23 PM

ಇಷ್ಟು ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಜಗದೀಶ್ ಅವರದ್ದೇ ಹವಾ ಆಗಿತ್ತು. ಆದರೆ ಈಗ ಹನುಮಂತ ಶೈನ್ ಆಗುತ್ತಿದ್ದಾರೆ. ದೊಡ್ಮನೆಗೆ ಕಾಲಿಡುತ್ತಿದ್ದಂತೆಯೇ ಅವರಿಗೆ ವಿಶೇಷ ಸವಲತ್ತುಗಳು ಸಿಕ್ಕಿವೆ. ಎಲ್ಲರನ್ನೂ ನಗಿಸುವಲ್ಲಿ ಹನುಮಂತ ಯಶಸ್ವಿ ಆಗುತ್ತಿದ್ದಾರೆ. ಅವರ ಸರಳ ಸ್ವಭಾವಕ್ಕೆ ಮನೆ ಮಂದಿ ಫಿದಾ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಏನಾಗುತ್ತಾ ನೋಡಬೇಕು.

ಲಾಯರ್ ಜಗದೀಶ್ ಇದ್ದಷ್ಟು ದಿನ ಬಿಗ್ ಬಾಸ್ ಮನೆಯೊಳಗೆ ಜಗಳವೇ ತುಂಬಿತ್ತು. ಈಗ ಆ ಜಾಗದಲ್ಲಿ ನಗು ಹರಡಲು ಹನುಮಂತ ಬಂದಿದ್ದಾರೆ. ವೈಲ್ಡ್ ಕಾರ್ಡ್​ ಮೂಲಕ ಬಂದಿರುವ ಅವರು ಆರಂಭದಲ್ಲೇ ನಗುವಿನ ಮಳೆ ಸುರಿಸುತ್ತಿದ್ದಾರೆ. ಹನುಮಂತ ಯಾರು ಎಂಬುದು ಬಹುತೇಕ ಎಲ್ಲ ಕಿರುತೆರೆ ವೀಕ್ಷಕರಿಗೆ ಗೊತ್ತು. ಆದರೂ ಸಹ ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಅವರು ಮತ್ತೊಮ್ಮೆ ತಮ್ಮ ಪರಿಚಯ ಮಾಡಿಕೊಂಡಿದ್ದಾರೆ. ಆ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಹನುಮಂತನ ಮಾತು ಕೇಳಿ ಎಲ್ಲರೂ ನಕ್ಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More