ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು

Edited By:

Updated on: Jul 25, 2025 | 10:41 PM

ಡಾರ್ಲಿಂಗ್ ಕೃಷ್ಣ ಅಭಿನಯದ ‘ಬ್ರ್ಯಾಟ್’ ಚಿತ್ರದ ಒಂದು ಹಾಡಿಗೆ ಲಹರಿ ಮಹೇಶ್ ಧ್ವನಿ ನೀಡಿದ್ದಾರೆ. ಈ ಗೀತೆಯನ್ನು ಶ್ರೇಯಾ ಘೋಷಾಲ್ ಅವರಿಂದ ಹಾಡಿಸಬೇಕು ಎಂಬುದು ಚಿತ್ರತಂಡದ ಪ್ಯ್ಲಾನ್ ಆಗಿತ್ತು. ಆದರೆ ಅರ್ಜುನ್ ಜನ್ಯ ಸಲಹೆ ಮೇರೆಗೆ ‘ಸರಿಗಮಪ’ ಖ್ಯಾತಿಯ ಸಿಂಗರ್ ಲಹರಿ ಮಹೇಶ್ ಅವರಿಗೆ ಈ ಚಾನ್ಸ್ ಸಿಕ್ಕಿತು.

‘ಬ್ರ್ಯಾಟ್’ ಸಿನಿಮಾದ ಒಂದು ಹಾಡಿಗೆ ಲಹರಿ ಮಹೇಶ್ (Lahari Mahesh) ಅವರು ಧ್ವನಿ ನೀಡಿದ್ದಾರೆ. ಈ ಹಾಡನ್ನು ಶ್ರೇಯಾ ಘೋಷಾಲ್ (Shreya Ghoshal) ಅವರಿಂದ ಹಾಡಿಸಬೇಕು ಎಂದು ಚಿತ್ರತಂಡ ನಿರ್ಧರಿಸಿತ್ತು. ಆದರೆ ಅರ್ಜುನ್ ಜನ್ಯ ಅವರ ಸಲಹೆ ಮೇರೆಗೆ ‘ಸರಿಗಮಪ’ ಖ್ಯಾತಿಯ ಗಾಯಕಿ ಲಹರಿ ಮಹೇಶ್ ಅವರಿಗೆ ಈ ಅವಕಾಶ ಸಿಕ್ಕಿತು. ಸಿದ್ ಶ್ರೀರಾಮ್ ಜೊತೆಯಲ್ಲಿ ಲಹರಿ ಮಹೇಶ್ ಅವರು ಈ ಹಾಡನ್ನು ಹಾಡಿದ್ದಾರೆ. ಆ ಕುರಿತು ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More