‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್

Updated on: May 21, 2025 | 10:50 AM

ಜೀ ಕನ್ನಡದ ‘ಸರಿಗಮಪ’ ಫಿನಾಲೆಗೆ ದಿನಗಣನೆ ಶುರುವಾಗಿದೆ. ಸದ್ಯ 9 ಸ್ಪರ್ಧಿಗಳು ಇದ್ದು ಸೆಮಿಫೈನಲ್ ನಡೆಯುತ್ತಿದೆ. ಈ ಸೆಮಿಫೈನಲ್​ನಲ್ಲಿ ಬರೋಬ್ಬರಿ 9 ಸ್ಪರ್ಧಿಗಳು ಇದ್ದು, ಈ ಪೈಕಿ ಯಾರೆಲ್ಲ ಫಿನಾಲೆ ತಲುಪುತ್ತಾರೆ ಎನ್ನುವ ಕುತೂಹಲ ಮೂಡಿದೆ. ಆ ಬಗ್ಗೆ ಇಲ್ಲಿದೆ ವಿವರ.  

ಜೀ ಕನ್ನಡದ ‘ಸರಿಗಮಪ’ (Saregamapa) ವೇದಿಕೆ ಸೆಮಿಫೈನಲ್​ಗೆ ಸಜ್ಜಾಗಿದೆ. 9 ಸ್ಪರ್ಧಿಗಳ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ಫೈನಲ್​ಗೆ ಆರು ಮಂದಿ ಮಾತ್ರ ಆಯ್ಕೆ ಆಗಲಿದ್ದಾರೆ. ಈಗಾಗಲೇ ಎರಡು  ಸ್ಪರ್ಧಿಗಳ ಆಯ್ಕೆ ನಡೆದಿದೆ. ಉಳಿದ ನಾಲ್ಕು ಸ್ಥಾನದಲ್ಲಿ ಯಾರು ಇರುತ್ತಾರೆ ಎಂಬುದು ಈ ವೀಕೆಂಡ್​ನಲ್ಲಿ ತಿಳಿಯಲಿದೆ. ಶನಿವಾರ ಹಾಗೂ ಭಾನುವಾರ ಸಂಜೆ  7.30ಕ್ಕೆ ಫಿನಾಲೆ ಎಪಿಸೋಡ್ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More