ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ

Updated on: Oct 08, 2024 | 7:41 PM

ಹೊಸಬರ ತಂಡ ಮಾಡಿರುವ ‘ವೃತ್ತ’ ಸಿನಿಮಾಕ್ಕೆ ಸತೀಶ್ ನೀನಾಸಂ ಬೆಂಬಲ ನೀಡಿದ್ದು, ತಮ್ಮದೇ ಬ್ಯಾನರ್​ನಿಂದ ಬಿಡುಗಡೆ ಮಾಡುತ್ತಿದ್ದಾರೆ. ಈ ಸಮಯದಲ್ಲಿ ಹೊಸ ಸಿನಿಮಾ ತಂಡಗಳಿಗೆ ಕೆಲವು ಸಲಹೆಗಳನ್ನು ಸತೀಶ್ ನೀನಾಸಂ ನೀಡಿದ್ದಾರೆ.

ನಟ ಸತೀಶ್ ನೀನಾಸಂ ಹೊಸಬರ ತಂಡವೊಂದಕ್ಕೆ ಬೆಂಬಲವಾಗಿ ನಿಂತಿದ್ದಾರೆ. ‘ವೃತ್ತ’ ಹೆಸರಿನ ಹೊಸಬರ ತಂಡವೊಂದು ಮಾಡಿರುವ ಸಿನಿಮಾವನ್ನು ತಮ್ಮದೇ ಬ್ಯಾನರ್​ನಿಂದ ಪ್ರೆಸೆಂಟ್ ಮಾಡಲು ಮುಂದೆ ಬಂದಿದ್ದಾರೆ ಸತೀಶ್. ಇದೇ ಸಿನಿಮಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸತೀಶ್ ನೀನಾಸಂ ಹೊಸ ತಂಡದ ಬಗ್ಗೆ ಭರಪೂರ ಮೆಚ್ಚುಗೆ ವ್ಯಕ್ತಪಡಿಸುವ ಜೊತೆಗೆ, ಮುಂದೆ ಚಿತ್ರರಂಗಕ್ಕೆ ಕಾಲಿಡಲು ಸಜ್ಜಾಗಿರುವ ಹೊಸ ತಂಡಗಳು ಹೇಗಿರಬೇಕು ಎಂದು ಹೇಳದ್ದಾರೆ. ಜೊತೆಗೆ ತಾವು ‘ಲೂಸಿಯಾ’ ಸಿನಿಮಾ ಮಾಡಿ ಪ್ರೇಕ್ಷಕರ ಮುಂದೆ ಬರಲು ರೆಡಿಯಾದಾಗ ತಮಗೆ ಆದ ಅನುಭವ ಹೇಗಿತ್ತು ಎಂಬುದನ್ನು ಸಹ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More