ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ

Updated on: Feb 18, 2026 | 10:42 PM

ಸತೀಶ್ ನೀನಾಸಂ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಚಿತ್ರ ಈಗ ಬಿಡುಗಡೆಗೆ ಸಜ್ಜಾಗಿದೆ. ಕನ್ನಡ ಅಷ್ಟೇ ಅಲ್ಲದೇ ತೆಲುಗು ಮತ್ತು ತಮಿಳು ಭಾಷೆಯಲ್ಲಿ ಸಹ ಈ ಸಿನಿಮಾ ರಿಲೀಸ್ ಆಗಲಿದೆ. ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಸತೀಶ್ ಅವರು ಅನೇಕ ವಿಷಯಗಳ ಬಗ್ಗೆ ಮಾತನಾಡಿದರು.

ಸತೀಶ್ ನೀನಾಸಂ ಅಭಿನಯದ ‘ದಿ ರೈಸ್ ಆಫ್ ಅಶೋಕ’ (The Rise of Ashoka) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಕನ್ನಡ ಮಾತ್ರವಲ್ಲದೇ ತೆಲುಗು ಮತ್ತು ತಮಿಳು ಭಾಷೆಯಲ್ಲಿ ಕೂಡ ಈ ಸಿನಿಮಾ ರಿಲೀಸ್ ಆಗಲಿದೆ. ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಸತೀಶ್ ಅವರು ಅನೇಕ ವಿಷಯಗಳ ಬಗ್ಗೆ ಮಾತನಾಡಿದರು. ಈ ಸಿನಿಮಾ ಎಷ್ಟು ಸ್ಪೆಷಲ್ ಎಂಬುದನ್ನು ಅವರು ವಿವರಿಸಿದರು. ತೆಲುಗು ಮತ್ತು ತಮಿಳಿನ ವಿತರಕರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಚಿತ್ರ ಮೂಡಿಬರಲು ಸಹಕರಿಸಿದ ಎಲ್ಲರಿಗೂ ಸತೀಶ್ ಅವರು ಧನ್ಯವಾದ ಅರ್ಪಿಸಿದರು. ರವಿಚಂದ್ರನ್, ದುನಿಯಾ ವಿಜಯ್, ಲೂಸ್ ಮಾದ ಯೋಗಿ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ವೇದಿಕೆ ಮೇಲೆ ಮಾತನಾಡುವಾಗ ಸತೀಶ್ ನೀನಾಸಂ (Sathish Ninasam) ಅವರು ಭಾವುಕರಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More