ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಶೀರ್ಷಿಕೆ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್ ನೀನಾಸಂ
ಸತೀಶ್ ನೀನಾಸಂ, ಸಪ್ತಮಿ ಗೌಡ ನಟನೆಯ ‘ದಿ ರೈಸ್ ಆಫ್ ಅಶೋಕ’ ಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದ ಹೆಸರಿನ ಬಗ್ಗೆ ಕೆಲವರು ತಕರಾರು ತೆಗೆದಿದ್ದರು. ಕನ್ನಡದ ಸಿನಿಮಾಗೆ ಇಂಗ್ಲಿಷ್ ಶೀರ್ಷಿಕೆ ಯಾಕೆ ಎಂಬುದು ಪ್ರಶ್ನೆ. ಅದಕ್ಕೆ ಸತೀಶ್ ನೀನಾಸಂ ಅವರು ‘ಟಿವಿ9’ ವಿಶೇಷ ಸಂದರ್ಶನದಲ್ಲಿ ಉತ್ತರ ನೀಡಿದ್ದಾರೆ.
ಸತೀಶ್ ನೀನಾಸಂ ಅಭಿನಯಿಸಿದ ‘ದಿ ರೈಸ್ ಆಫ್ ಅಶೋಕ’ (The Rise of Ashoka) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾದ ಶೀರ್ಷಿಕೆ ಬಗ್ಗೆ ಕೆಲವರು ತಕರಾರು ತೆಗೆದಿದ್ದರು. ಕನ್ನಡದ ಸಿನಿಮಾಗೆ ಇಂಗ್ಲಿಷ್ ಶೀರ್ಷಿಕೆ ಯಾಕೆ ಎಂಬುದು ಪ್ರಶ್ನೆ. ಅದಕ್ಕೆ ‘ಟಿವಿ9’ ವಿಶೇಷ ಸಂದರ್ಶನದಲ್ಲಿ ಸತೀಶ್ ನೀನಾಸಂ (Sathish Ninasam) ಅವರು ಉತ್ತರ ನೀಡಿದ್ದಾರೆ. ‘ಅಶೋಕನ ಬೆಳವಣಿಗೆ ಅಂತ ಇಡೋಕೆ ಆಗಲ್ಲ. ಅಶೋಕ ಎದ್ದ ಅನ್ನೋಕೆ ಅಲ್ಲ. ದಿ ರೈಸ್ ಆಫ್ ಅಶೋಕ ಎಂದರೆ ಅದರಲ್ಲಿ ಒಂದು ಫೋರ್ಸ್ ಇದೆ. ಕೆಜಿಎಫ್ ಅಂತ ಶೀರ್ಷಿಕೆ ಇಟ್ಟಿದ್ದರು. ಕೋಲಾರದ ಚಿನ್ನದ ಗಣಿ ಅಂತ ಶೀರ್ಷಿಕೆ ಇಟ್ಟರೆ ಯಾವುದೋ ಕಲಾತ್ಮಕ ಸಿನಿಮಾ ಅಂದುಕೊಂಡು ಯಾರೂ ಬರಲ್ಲ’ ಎಂದು ಸತೀಶ್ ನೀನಾಸಂ ಅವರು ನಕ್ಕಿದ್ದಾರೆ. ಈ ಸಂದರ್ಶನದಲ್ಲಿ ಚಿತ್ರದ ನಾಯಕಿ ಸಪ್ತಮಿ ಗೌಡ (Sapthami Gowda) ಕೂಡ ಭಾಗವಹಿಸಿದ್ದಾರೆ. ತಮ್ಮ ಪಾತ್ರದ ಬಗ್ಗೆ ಅವರು ಮಾತನಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!

