ಮೈಸೂರು ಗಲಭೆ ಪ್ರಕರಣ: ಆರೋಪಿ ಸತೀಶ್ ಗೆ ಇಂದು ಜಾಮೀನು ಸಿಗುವ ಸಾಧ್ಯತೆ ಎಂದ ವಕೀಲ

ಅರುಣ್​ ಕುಮಾರ್​ ಬೆಳ್ಳಿ

Updated on: Feb 15, 2025 | 10:20 AM

ಸತೀಶ್ ಅವರನ್ನು ಕೋರ್ಟ್​ಗೆ ಹಾಜರುಪಡಿಸಿದ ಪೊಲೀಸರು ಕಕ್ಷಿದಾರನ ವಿರುದ್ಧ ಮಾಡಿರುವ ಆರೋಪಗಳಿಗೆ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ, ಸತೀಶ್ ಧರ್ಮವೊಂದರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದರೆ ಅದಕ್ಕೆ ಪುರಾವೆಯನ್ನು ನ್ಯಾಯಾಲಯಕ್ಕೆ ನೀಡಬೇಕಿತ್ತು, ಇದೇ ಆಧಾರದ ಮೇಲೆ ತಾನು ವಾದ ಮಾಡಿರುವುದಾಗಿ ಹೇಳಿದ ವಕೀಲ, ಇಂದು ಸತೀಶ್ ಗೆ ಜಾಮೀನು ಸಿಗಲಿದೆ ಎಂದರು.

ಮೈಸೂರು: ನಗರದಲ್ಲಿ ಮೊನ್ನೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸತೀಶ್ ಅಲಿಯಾಸ್ ಪಾಂಡುರಂಗ ಹೆಸರಿನ ವ್ಯಕ್ತಿಯನ್ನು ವಶಕ್ಕೆ ಪಡೆದು ನಿನ್ನೆ ಸಾಯಂಕಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಅವರ ಜಾಮೀನು ಕುರಿತ ವಿಚಾರಣೆ ನಡೆದಿದ್ದು ನ್ಯಾಯಲಯ ತೀರ್ಪನ್ನು ಶನಿವಾರಕ್ಕೆ ಕಾಯ್ದಿರಿಸಿದೆ. ಪ್ರಚೋದನಕಾರಿ ಪೋಸ್ಟೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪವನ್ನು ಸತೀಶ್ ಎದುರಿಸುತ್ತಿದ್ದಾರೆ. ಅವರ ಪರ ವಕೀಲರೊಬ್ಬರು ಮಾಧ್ಯಮಗಳೊಂದಿಗೆ ಮಾತಾಡಿದ್ದು ಇಂದು ಜಾಮೀನು ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮೈಸೂರು ಘಟನೆಯಲ್ಲಿ ಪೊಲೀಸರೇ ತಪ್ಪಿತಸ್ಥರಾಗಿ ಶಿಕ್ಷೆಗೊಳಗಾದರೆ ಆಶ್ಚರ್ಯವಿಲ್ಲ: ಆರ್ ಅಶೋಕ, ವಿಪಕ್ಷ ನಾಯಕ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.