ಶಿವಕುಮಾರ್ ಬೆಂಗಳೂರಿಂದ ಬೆಳಗಾವಿ ಬಂದರೂ ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಸತೀಶ್ ಜಾರಕಿಹೊಳಿ, ಲಕ್ಷ್ಮಿಹೆಬ್ಬಾಳ್ಕರ್ ಬರಲಿಲ್ಲ
ಸತೀಶ್ ಜಾರಕಿಹೊಳಿ ಮುನಿಸು ಅರ್ಥವಾಗುತ್ತದೆ ಆದರೆ ಲಕ್ಷ್ಮಿ ಮೇಡಂ ಯಾವ ಕಾರಣಕ್ಕೆ ಬಾರದೆ ಹೋದರೋ? ಜಿಲ್ಲೆಯಲ್ಲಿ ಬೇರೆ ಬೇರೆ ರಾಜಕೀಯ ವಿದ್ಯಮಾನಗಳು ಜರುಗುತ್ತಿವೆ. ಗೋಕಾಕ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬೆಂಗಳೂರಲ್ಲಿ ಮಂಗಳವಾರ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಬೆಳಗಾವಿ: ಬೆಂಗಳೂರಿಂದ ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಬಂದಿಳಿದ ಡಿಕೆ ಶಿವಕುಮಾರ್ (DK Shivakumar) ಅವರನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹಾರ್ದಿಕವಾಗಿ ಬರಮಾಡಿಕೊಂಡರು. ಕಾರ್ಯಕರ್ತರು ಸಡಗರದಿಂದ ಹಾರ ಮತ್ತು ಗಾಂಧಿ ಟೋಪಿಯನ್ನು ತೊಡಿಸಿ ಶಿವಕುಮಾರ್ ರನ್ನು ಸ್ವಾಗತಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಕಾಣುತ್ತದೆ. ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಜೊತೆ ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾಗುರುವ ಪ್ರಕಾಶ್ ಹುಕ್ಕೇರಿ (Prakash Hukkeri) ಸಹ ಹಾಜರಿದ್ದರು. ಅದೆಲ್ಲ ಸರಿ, ಎಲ್ಲರಿಗಿಂತ ಮೊದಲು ವಿಮಾನ ನಿಲ್ದಾಣದಲ್ಲಿ ಹಾಜರಿರಬೇಕಿದ್ದವರೇ ನಾಪತ್ತೆ! ಹೌದು, ಶಿವಕುಮಾರ್ ಮೇಲೆ ಹಲವು ಕಾರಣಗಳಿಗಾಗಿ ಮುನಿಸಿಕೊಂಡಿರುವ ಬೆಳಗಾವಿ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ವಿಮಾನ ನಿಲ್ದಾಣದಲ್ಲಿ ಕಾಣಿಸಲಿಲ್ಲ. ಸತೀಶ್ ಜಾರಕಿಹೊಳಿ ಮುನಿಸು ಅರ್ಥವಾಗುತ್ತದೆ ಆದರೆ ಲಕ್ಷ್ಮಿ ಮೇಡಂ ಯಾವ ಕಾರಣಕ್ಕೆ ಬಾರದೆ ಹೋದರೋ? ಜಿಲ್ಲೆಯಲ್ಲಿ ಬೇರೆ ಬೇರೆ ರಾಜಕೀಯ ವಿದ್ಯಮಾನಗಳು ಜರುಗುತ್ತಿವೆ. ಗೋಕಾಕ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬೆಂಗಳೂರಲ್ಲಿ ಮಂಗಳವಾರ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
