ಮೈಸೂರಲ್ಲಿ ಪರಮೇಶ್ವರ್ ಹೇಳಿದ್ದನ್ನೇ ಚಿಕ್ಕಮಗಳೂರಲ್ಲಿ ಸತೀಶ್ ಜಾರಕಿಹೊಳಿ ಹೇಳಿದರು!
ಕನ್ನಡಿಗರಿಗೆಲ್ಲ ಗೊತ್ತಿರುವ ಹಾಗೆ ಸಿದ್ದರಾಮಯ್ಯರನ್ನು ಬದಲಾಯಿಸುವ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಂಡರೆ ಸತೀಶ್ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆಯಾದರೂ ಡಿಕೆ ಶಿವಕುಮಾರ್ ಅವರನ್ನು ಕನ್ವಿನ್ಸ್ ಮಾಡೋರು ಯಾರು?
ಚಿಕ್ಕಮಗಳೂರು: ನಿನ್ನೆ ರಾತ್ರಿ ಮೈಸೂರಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಮನೆಯಲ್ಲಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಭಾಗಿಯಾಗಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಗೃಹ ಸಚಿವ ಪರಮೇಶ್ವರ್ ಹೇಳಿದ್ದನ್ನೇ ಪುನರುಚ್ಛರಿಸಿ, ದಲಿತ ನಾಯಕರ ನಡುವೆ ಸಿಎಂ ಬದಲಾವಣೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ, ಕೇಳಿದ್ದನ್ನೇ ಕೇಳಬೇಡಿ, ಬೇರೆಯೇನಾದರೂ ಕೇಳಿ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮತ್ತೊಮ್ಮೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು; ಮುಖ್ಯಮಂತ್ರಿ ರೇಸ್ನಲ್ಲಿ ಸತೀಶ್ ಜಾರಕಿಹೊಳಿ ಹೆಸರು!
Latest Videos