ಲಕ್ಷ್ಮೀ ಹೆಬ್ಬಾಳ್ಕರ್​​ ಪರ ನಿಂತ ಸತೀಶ್ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?

Edited By:

Updated on: Aug 15, 2026 | 7:53 PM

ಡಿಕೆ ಶಿವಕುಮಾರ್ ಸಂಪುಟದಲ್ಲಿ ಮಹಿಳಾ ಸಚಿವ ಸ್ಥಾನ ಮೀಸಲಿರಿಸಲಾಗಿದೆ. ಸಚಿವ ಸಂಪುಟ ಪುನಾರಚನೆ ವೇಳೆ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಅವರಿಗೆ ಮಣೆ ಹಾಕಲಾಗಿತ್ತು. ಆದ್ರೆ, ಬದಲಾದ ಸನ್ನವೇಶಗಳಿಂದ ಅವರು ಸಚಿವರಾಗಿ ಅಧಿಕಾರಿ ಸ್ವೀಕಾರ ಮಾಡಲಿಲ್ಲ. ಹೀಗಾಗಿ ಅದೊಂದು ಸ್ಥಾನ ಖಾಲಿ ಉಳಿದಿದ್ದು, ಇದಕ್ಕೆ ಉಮಾಶ್ರೀ, ಲಕ್ಷ್ಮೀ ಹೆಬ್ಬಾಳ್ಕರ್ ರೇಸ್​​ನಲ್ಲಿದ್ದಾರೆ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್​ ಪರವಾಗಿ ಸತೀಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿರುವುದು ಅಚ್ಚರಿ ಮೂಡಿಸಿದೆ. ಹೌದು..ರಾಜ್ಯ ರಾಜಕಾರಣವೇ ಬೇರೆ ಬೆಳಗಾವಿ ರಾಜಕಾರಣವೇ ಬೇರೆ, ಬೆಳಗಾವಿಯಲ್ಲಿ ಕುಟುಂಬ ಕುಟುಂಬಗಳ ನಡುವಿನ ಜಿದ್ದಾಜಿದ್ದಿ ಇದೆ. ಲಕ್ಷ್ಮೀ ಹೆಬ್ಬಾಳ್ಕರ್​​​​​ ಹಾಗೂ ಜಾರಕಿಹಿಳಿ ಕುಟುಂಬ ಒಂದು ರೀತಿ ಹಾವು ಮುಂಗಸಿ ಇದ್ದಂತೆ. ಆದರೂ ಇದೀಗ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಪರ ಬ್ಯಾಟಿಂಗ್ ಮಾಡಿದ್ದಾರೆ ಕುತೂಹಲ ಮೂಡಿಸಿದೆ.

ಬೆಳಗಾವಿ, (ಆಗಸ್ಟ್ 15): ಡಿಕೆ ಶಿವಕುಮಾರ್ ಸಂಪುಟದಲ್ಲಿ ಮಹಿಳಾ ಸಚಿವ ಸ್ಥಾನ ಮೀಸಲಿರಿಸಲಾಗಿದೆ. ಸಚಿವ ಸಂಪುಟ ಪುನಾರಚನೆ ವೇಳೆ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಅವರಿಗೆ ಮಣೆ ಹಾಕಲಾಗಿತ್ತು. ಆದ್ರೆ, ಬದಲಾದ ಸನ್ನವೇಶಗಳಿಂದ ಅವರು ಸಚಿವರಾಗಿ ಅಧಿಕಾರಿ ಸ್ವೀಕಾರ ಮಾಡಲಿಲ್ಲ. ಹೀಗಾಗಿ ಅದೊಂದು ಸ್ಥಾನ ಖಾಲಿ ಉಳಿದಿದ್ದು, ಇದಕ್ಕೆ ಉಮಾಶ್ರೀ, ಲಕ್ಷ್ಮೀ ಹೆಬ್ಬಾಳ್ಕರ್ ರೇಸ್​​ನಲ್ಲಿದ್ದಾರೆ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್​ ಪರವಾಗಿ ಸತೀಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿರುವುದು ಅಚ್ಚರಿ ಮೂಡಿಸಿದೆ. ಹೌದು..ರಾಜ್ಯ ರಾಜಕಾರಣವೇ ಬೇರೆ ಬೆಳಗಾವಿ ರಾಜಕಾರಣವೇ ಬೇರೆ, ಬೆಳಗಾವಿಯಲ್ಲಿ ಕುಟುಂಬ ಕುಟುಂಬಗಳ ನಡುವಿನ ಜಿದ್ದಾಜಿದ್ದಿ ಇದೆ. ಲಕ್ಷ್ಮೀ ಹೆಬ್ಬಾಳ್ಕರ್​​​​​ ಹಾಗೂ ಜಾರಕಿಹಿಳಿ ಕುಟುಂಬ ಒಂದು ರೀತಿ ಹಾವು ಮುಂಗಸಿ ಇದ್ದಂತೆ. ಆದರೂ ಇದೀಗ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಪರ ಬ್ಯಾಟಿಂಗ್ ಮಾಡಿದ್ದಾರೆ ಕುತೂಹಲ ಮೂಡಿಸಿದೆ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More