ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ? ಸತೀಶ್ ಜಾರಕಿಹೊಳಿ ಹೇಳಿದ್ದೇನು?

Updated on: Apr 21, 2026 | 8:40 PM

ದಾವಣಗೆರೆ ಉಪಚುನಾವಣೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಗೊಂದಲಗಳ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಫಲಿತಾಂಶದ ಬಳಿಕ ಹೈಕಮಾಂಡ್ ನಿರ್ಧರಿಸಲಿದೆ ಎಂದರು. ಇಂತಹ ಕ್ರಮಗಳು ಪಕ್ಷದ ಮತಬ್ಯಾಂಕ್ ಮೇಲೆ ಪರಿಣಾಮ ಬೀರುತ್ತವೆ ಎಂಬುದನ್ನು ತಳ್ಳಿಹಾಕಿದರು.

ಬೆಂಗಳೂರು, ಏ.21: ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದ್ದಂತೆ ಕಾಂಗ್ರೆಸ್​​​​ನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ಮೂವರು ಮುಸ್ಲಿಂ ನಾಯಕರನ್ನು ಗುರಿ ಮಾಡಲಾಗಿತ್ತು. ಇದರಲ್ಲಿಅಬ್ದುಲ್ ಜಬ್ಬಾರ್ ಅವರನ್ನು ಅಲ್ಪಸಂಖ್ಯಾತ ಘಟಕದ ಸ್ಥಾನದಿಂದ ಕೆಳಗಿಸಿ, ಕಾಂಗ್ರೆಸ್​​ ಪ್ರಾಥಮಿಕ ಸ್ಥಾನದಿಂದ ವಜಾ ಮಾಡಲಾಗಿತ್ತು. ನಂತರ ನಸೀರ್​ ಅಹ್ಮದ್​ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿತ್ತು. ಇದೀಗ ಜಮೀರ್​​ ಕೂಡ ಇದು ದೊಡ್ಡ ಸಂಕಷ್ಟವಾಗಿದೆ. ಇದೀಗ ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ ಮೇಲೆ ಇವರ ಮೇಲೆಯೂ ಕ್ರಮವಾಗುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆ ಉಪಚುನಾವಣೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಗೊಂದಲಗಳ ಕುರಿತು ಸಚಿವ ಸತೀಶ್ ಜಾರಕಿಹೊಳಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಂ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಸ್ತಾಪಗಳು ಕೇಳಿ ಬರುತ್ತಿದ್ದು, ಇದು ಚುನಾವಣೆ ಸಂದರ್ಭದಲ್ಲಿ ಸಹಜ ಎಂದು ಅವರು ಹೇಳಿದರು. ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಗಳು ಕೇಳಿಬರುತ್ತಿದ್ದರೂ, ಫಲಿತಾಂಶ ಬರುವವರೆಗೂ ಕಾದು ನೋಡಬೇಕು ಎಂದು ಜಾರಕಿಹೊಳಿ ಸ್ಪಷ್ಟಪಡಿಸಿದರು. ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ಯಾವುದೇ ಕ್ರಮ ಕೈಗೊಳ್ಳುವ ಹಂತದಲ್ಲಿ ತಾವು ಇಲ್ಲ ಎಂದು ತಿಳಿಸಿದರು. ಕ್ರಮ ಕೈಗೊಳ್ಳುವ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಮುಸ್ಲಿಂ ನಾಯಕರ ಮೇಲಿನ ಕ್ರಮಗಳು ಮತಬ್ಯಾಂಕ್ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More