AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!

ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!

ರಮೇಶ್ ಬಿ. ಜವಳಗೇರಾ
|

Updated on: Sep 09, 2026 | 5:20 PM

Share

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ ಮಾಡಿದೆ, ಇಂದು (ಸೆಪ್ಟೆಂಬರ್ 09) ಬೆಳಗ್ಗೆ ಬೆಳಗಾವಿ, ಬೆಂಗಳೂರು ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ವಿದೇಶದಲ್ಲಿ ಹಣ ಹೂಡಿಕೆ ಮಾಡಿರುವ ಬಗ್ಗೆಯೂ ಸತೀಶ್ ಜಾರಕಿಹೊಳಿಯಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇನ್ನು ಈ ದಾಳಿಯನ್ನು ಸತೀಶ್ ಜಾರಕಿಹೊಳಿ ಬೆಂಬಲಿಗರು ಖಂಡಿಸಿದ್ದು, ಬೆಂಗಳೂರಿನಲ್ಲಿ ಇಡಿ ದಾಳಿ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 09): ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ ಮಾಡಿದೆ, ಇಂದು (ಸೆಪ್ಟೆಂಬರ್ 09) ಬೆಳಗ್ಗೆ ಬೆಳಗಾವಿ, ಬೆಂಗಳೂರು ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ವಿದೇಶದಲ್ಲಿ ಹಣ ಹೂಡಿಕೆ ಮಾಡಿರುವ ಬಗ್ಗೆಯೂ ಸತೀಶ್ ಜಾರಕಿಹೊಳಿಯಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇನ್ನು ಈ ದಾಳಿಯನ್ನು ಸತೀಶ್ ಜಾರಕಿಹೊಳಿ ಬೆಂಬಲಿಗರು ಖಂಡಿಸಿದ್ದು, ಬೆಂಗಳೂರಿನಲ್ಲಿ ಇಡಿ ದಾಳಿ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸದೊಳಗೆ ನುಗ್ಗಲು ಯತ್ನಿಸಿದ ಬೆಂಬಲಿಗರನ್ನು ಪೊಲೀಸರು ಮತ್ತು CRPF ಸಿಬ್ಬಂದಿ ತಡೆ ಹಿಡಿದಿದ್ದಾರೆ. ಒಮ್ಮೆ ಸಾಹೇಬ್ರನ್ನ ನೋಡಿ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ದು, ಇದಕ್ಕೆ ಸಿಆರ್​​ಪಿಎಸ್ ಸಿಬ್ಬಂದಿ ಸಾಧ್ಯವಿಲ್ಲ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us