ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್ ಜಾರಕಿಹೊಳಿ: ಜಿಟಿ ದೇವೇಗೌಡ ಸ್ಫೋಟಕ ಹೇಳಿಕೆ
ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಬಗ್ಗೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಮೈಸೂರಿನಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುಂದೆ ಸಿಎಂ ಆಗುವ ಅವಕಾಶ ಸಿಕ್ಕರೆ ಬೆಂಬಲ ನೀಡುವಂತೆ ಕುಮಾರಸ್ವಾಮಿ ಅವರ ಬಳಿ ಸತೀಶ್ ಕೇಳಿರಬಹುದು ಎಂದು ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. ಜಿಟಿ ದೇವೇಗೌಡ ಮಾತಿನ ವಿಡಿಯೋ ಇಲ್ಲಿದೆ.
ಮೈಸೂರು, ಮಾರ್ಚ್ 27: ಮುಂದೆ ಸಿಎಂ ಆಗುವ ಸಂದರ್ಭ ಬಂದರೆ, ಅವಕಾಶ ಸಿಕ್ಕಿದರೆ ಬೆಂಬಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಬಳಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿರಬಹುದು ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಆಗುವ ಅವಕಾಶ ಸಿಕ್ಕದರೆ ಜೆಡಿಎಸ್ನ 18 ಶಾಸಕರ ಬೆಂಬಲ ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಕೇಳಿರಬಹುದು. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂದರು. ಅವರ ಮಾತಿನ ಪೂರ್ಣ ವಿವರ ಇಲ್ಲಿದೆ.