ನವೆಂಬರ್ ಕ್ರಾಂತಿ ಚರ್ಚೆ ನಡುವೆ ಸುರ್ಜೇವಾಲಾ ಭೇಟಿಯಾಗಿದ್ದೇಕೆ ಸಚಿವ ಸತೀಶ್ ಜಾರಕಿಹೊಳಿ?
ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಮತ್ತು ಸಂಪುಟ ಪುನಾರಚನೆಯ ಚರ್ಚೆಗಳ ಮಧ್ಯೆ ನಡೆದ ಈ ಭೇಟಿ ಭಾರಿ ಕುತೂಹಲ ಮೂಡಿಸಿದೆ. ಸುರ್ಜೇವಾಲಾ ಜೊತೆ ಸತೀಶ್ ಮಹತ್ವದ ಚರ್ಚೆಗಳನ್ನ ಈ ವೇಳೆ ನಡೆಸಿದ್ದಾರೆ ಎನ್ನಲಾಗಿದೆ.
ದೆಹಲಿ, ನವೆಂಬರ್ 12: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಸುರ್ಜೇವಾಲಾ ಅವರ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ಮಹತ್ವದ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಬದಲಾವಣೆ ಕೂಗು ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿ ಕೇಳಿಬರುತ್ತಿವೆ. ಸಚಿವರು ಮತ್ತು ಶಾಸಕರು ಈ ಕುರಿತು ವಿವಿಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ಮಧ್ಯೆ ಸತೀಶ್ ಜಾರಕಿಹೊಳಿ ಅವರು ಸುರ್ಜೇವಾಲಾ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಈ ಭೇಟಿಯು ರಾಜ್ಯ ಕಾಂಗ್ರೆಸ್‌ನಲ್ಲಿನ ಆಂತರಿಕ ವಿಚಾರಗಳು ಮತ್ತು ಭವಿಷ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ಸುಳಿವು ನೀಡುತ್ತಿದ್ಯಾ ಎಂಬ ಪ್ರಶ್ನೆಗೂ ಕಾರಣವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 12, 2025 06:26 AM
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ

